Just In
Don't Miss
- Finance
ಅತೀ ಕಡಿಮೆ ಬಡ್ಡಿದರದಲ್ಲಿ ವೈಯಕ್ತಿಕ ಸಾಲ ನೀಡುತ್ತೆ ಈ ಬ್ಯಾಂಕುಗಳು!
- Movies
ಹಿಟ್ಲರ್ ಕಲ್ಯಾಣ: ತನ್ನ ತಾಯಿಗೆ ಪಾಠ ಕಲಿಸುತ್ತಾಳ ಲೀಲಾ?
- News
ಪಕ್ಷ ಬಿಡೋರು ಬಿಡಲಿ, ಹೊಸದಾಗಿ ಪಕ್ಷ ಕಟ್ತೀವಿ: ಉದ್ಧವ್ ಠಾಕ್ರೆ
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
SL-w vs IND-w 2ನೇ ಟಿ20: ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಕೌರ್ ಪಡೆ; ಪಂದ್ಯ ಯಾವಾಗ, ಎಲ್ಲಿ?
- Automobiles
ಹೇಗಿವೆ ಗೊತ್ತಾ ರಾಯಲ್ ಎನ್ಫೀಲ್ಡ್ ಕಸ್ಟಮೈಸ್ಡ್ ಬೈಕ್ಗಳು: ಅಭಿಮಾನಿಗಳಿಗಾಗಿ 4 ಮಾದರಿಗಳ ಪ್ರದರ್ಶನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಭಾರತಕ್ಕೆ ಎಂಟ್ರಿ ಕೊಟ್ಟ ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ತನ್ನದೇ ಆದ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ಭಾರತದಲ್ಲಿ ಹೊಸ ಮೊಟೊರೊಲಾ ಎಡ್ಜ್ 30 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಸಿಸ್ಟಮ್-ಆನ್-ಚಿಪ್‌ನೊಂದಿಗೆ ಭಾರತದಲ್ಲಿ ಬಿಡುಗಡೆಯಾದ ಮೊದಲ ಸ್ಮಾರ್ಟ್‌ಫೋನ್ ಆಗಿದೆ.

ಹೌದು, ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,020mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 27,999 ರೂ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ FHD+ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ಅನ್ನು ಬೆಂಬಲಿಸಲಿದೆ. ಇದು HDR10+ ತಂತ್ರಜ್ಞಾನವನ್ನು ಬೆಂಬಲಿಸಲಿದ್ದು, 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದಲ್ಲದೆ ಈ ಫೋನ್ ಗೇಮಿಂಗ್‌ಗಾಗಿ, ಫೋನ್ ಮೋಟೋ ಗೇಮ್ ಟೈಮ್, ಕ್ವಾಲ್ಕಾಮ್ ಎಲೈಟ್ ಗೇಮಿಂಗ್ ಮತ್ತು ಕ್ವಾಲ್ಕಾಮ್ ಗೇಮ್ ಕ್ವಿಕ್ ಟಚ್ ಅನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಮೋಟೋ ಎಡ್ಜ್ 30 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾ ಸೆಟಪ್ ಆಪ್ಟಿಕಲ್ ಇಮೇಜ್ ಸ್ಟೆಬಲೈಸೇಶನ್ ಟೆಕ್ನಾಲಜಿಯನ್ನು ಹೊಂದಿದೆ. ಇದಲ್ಲದೆ ಕ್ವಾಡ್-ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್‌ಫೋನ್ 4,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೋಪವರ್ ಚಾರ್ಜಿಂಗ್ ತಂತ್ರಜ್ಞಾನ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡಾಲ್ಬಿ ಅಟ್ಮಾಸ್‌ನೊಂದಿಗೆ ಸ್ಟಿರಿಯೊ ಸ್ಪೀಕರ್‌ಗಳು, 13 5G ಬ್ಯಾಂಡ್‌ಗಳಿಗೆ ಬೆಂಬಲ ಮತ್ತು ವೈಫೈ 6E ಸೇರಿದೆ. ಈ ಫೋನ್ ಭಾರತದ ಹಗುರವಾದ 5G ಸ್ಮಾರ್ಟ್‌ಫೋನ್ ಎಂದು ಮೊಟೊರೊಲಾ ಕಂಪೆನಿ ಹೇಳಿದೆ.

ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 30 ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ 6GB + 128GB ಸ್ಟೋರೇಜ್ ಮಾದರಿಗೆ 27,999ರೂ ಹಾಗೂ 8GB + 128GB ರೂಪಾಂತರದ ಬೆಲೆ 29,999ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಅರೋರಾ ಗ್ರೀನ್ ಮತ್ತು ಮೆಟಿಯರ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಇತರ ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮೇ 19 ರಿಂದ ಭಾರತದಲ್ಲಿ ಲಭ್ಯವಾಗಲಿದೆ. ಇನ್ನು ಲಾಂಚ್ ಆಫರ್‌ನಲ್ಲಿ ಫ್ಲಿಪ್‌ಕಾರ್ಟ್ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000 ರೂಪಾಯಿಗಳ ತ್ವರಿತ ರಿಯಾಯಿತಿಯನ್ನು ನೀಡುತ್ತಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999