Motorola: ಭಾರಿ ಸದ್ದು ಮಾಡಿದ್ದ ಈ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್: ಪವರ್ ಫುಲ್ ಪ್ರೊಸೆಸರ್!
ಭಾರತದ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಇದೀಗ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದೆ. ಜನಪ್ರಿಯ ಇ-ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಬರೋಬ್ಬರಿ 17% ಡಿಸ್ಕೌಂಟ್ ಪಡೆಯುವ ಮೂಲಕ ಗ್ರಾಹಕರ ಹುಬ್ಬೇರುವಂತೆ ಮಾಡಿದೆ. ಇದು 8GB RAM ಮತ್ತು 128 GB ಸ್ಟೋರೇಜ್ ಅಯ್ಕೆಗೆ ಅನ್ವಯಿಸಲಿದೆ.
ಹೌದು, Motorola Edge 40 Neo ಸ್ಮಾರ್ಟ್‌ಫೋನ್ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಇದರಿಂದ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ರಿಯಾಯಿತಿ ನಂತರದ ಬೆಲೆ ಎಷ್ಟಿದೆ? ಇದರ ಫೀಚರ್ಸ್ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನಿನ 8GB RAM ಮತ್ತು 128 GB ಸ್ಟೋರೇಜ್ ಆಯ್ಕೆಯು ಫ್ಲಿಪ್‌ಕಾರ್ಟ್ ತಾಣದಲ್ಲಿ 27,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದೀಗ 17% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ ಇದರ ಬೆಲೆ 22,999ರೂ ಗಳಿಗೆ ಇಳಿಕೆಯಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅನ್ನು ವಿವಿಧ ಕಾರ್ಡ್‌ಗಳ ಮೂಲಕ ಖರೀದಿಸುವವರಿಗೆ ಹೆಚ್ಚುವರಿ ರಿಯಾಯಿತಿ ಕೂಡ ದೊರೆಯಲಿದೆ. ಇದನ್ನು ನೀವು ಸೂಥಿಂಗ್ ಸೀ ಕಲರ್ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.
ಮೋಟೋ ಎಡ್ಜ್ 40 ನಿಯೋ ಫೀಚರ್ಸ್ ಹೇಗಿದೆ?
ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸಪೋರ್ಟ್ ಮಾಡಲಿದೆ.

ಮೋಟೋ ಎಡ್ಜ್ 40 ನಿಯೋ ಪ್ರೊಸೆಸರ್ ಹೇಗಿದೆ?
ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲ ದೊಂದಿಗೆ ರನ್ ಆಗಲಿದೆ. ಹಾಗೆಯೇ 8GB RAM + 12GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಪ್ರಸ್ತುತ 8GB RAM + 12GB ಆಯ್ಕೆಯು ಡಿಸ್ಕೌಂಟ್‌ನಲ್ಲಿ ದೊರೆಯುತ್ತಿದೆ.
ಮೋಟೋ ಎಡ್ಜ್ 40 ನಿಯೋ ಕ್ಯಾಮೆರಾ ಸೆಟಪ್
ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮೋಟೋ ಎಡ್ಜ್ 40 ನಿಯೋ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್‌ಅನ್‌ಲಾಕ್, 5G, ಬ್ಲೂಟೂತ್, NFC, Wi-Fi ಮತ್ತು USB ಟೈಪ್-ಸಿ ಮತ್ತು ಸ್ಪೀಕರ್ ಗ್ರಿಲ್‌ನೊಂದಿಗೆ ಬರಲಿದೆ.


Click it and Unblock the Notifications








