ಮೊಟೊರೊಲಾ ಎಡ್ಜ್ 40 ನಿಯೋ ಲಾಂಚ್ ಡೇಟ್ ಫಿಕ್ಸ್! ಫೀಚರ್ಸ್ ನಿರೀಕ್ಷೆ ಏನು?
ಭಾರತದ ಮಾರುಕಟ್ಟೆಯಲ್ಲಿ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳಿಗೆ ಉತ್ತಮ ಮಾರುಕಟ್ಟೆಯಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮೊಬೈಲ್ ಪ್ರಿಯರ ಗಮನಸೆಳೆದಿದೆ. ಇದೀಗ ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.
ಹೌದು, ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಮೊಟೊರೊಲಾ ಕಂಪೆನಿ ತಿಳಿಸಿರುವಂತೆ ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 21ರಂದು ಭಾರತದಲ್ಲಿ ಲಾಂಚ್ ಆಗಲಿದೆ. ಇನ್ನು ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್ 40 ನಿಯೋ ಡಿಸ್‌ಪ್ಲೇ ರಚನೆ
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಇದು 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದ್ದು, DCI-P3 ಕವರೇಜ್ ಮತ್ತು 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 40 ನಿಯೋ ಪ್ರೊಸೆಸರ್ ಯಾವುದು?
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಇದು ಮಾಲಿ G77 GPU ಸಪೋರ್ಟ್ ಪಡೆದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.
ಮೊಟೊರೊಲಾ ಎಡ್ಜ್ 40 ನಿಯೋ ಕ್ಯಾಮೆರಾ ಸೆಟ್‌ಅಪ್
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ನೊಂದಿಗೆ ಬರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.
ಮೊಟೊರೊಲಾ ಎಡ್ಜ್ 40 ನಿಯೋ ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 68W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್, NFC, Wi-Fi ಮತ್ತು USB ಟೈಪ್-ಸಿ ಮತ್ತು ಸ್ಪೀಕರ್ ಗ್ರಿಲ್‌ನೊಂದಿಗೆ ಬರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಗೈರೋಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಅನ್ನು ಬೆಂಬಲಿಸುವ ನಿರೀಕ್ಷೆಯಿದೆ.
ಮೊಟೊರೊಲಾ ಎಡ್ಜ್ 40 ನಿಯೋ ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 21ರಂದು ಭಾರತದಲ್ಲಿ ಲಾಂಚ್ ಆಗಲಿದೆ. ಈ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದು ಕ್ಯಾನೆಲ್ ಬೇ, ಬ್ಲ್ಯಾಕ್ ಬ್ಯೂಟಿ ಮತ್ತು ಹಿತವಾದ ಸಮುದ್ರದ ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.


Click it and Unblock the Notifications








