Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಮೊಟೊರೊಲಾ ಎಡ್ಜ್‌ 40 ನಿಯೋ ಬೆಲೆ ಬಹಿರಂಗ! ಲಭ್ಯತೆ ಯಾವಾಗ?

ಮೊಟೊರೊಲಾ ಕಂಪೆನಿಯ ಬಹು ನಿರೀಕ್ಷಿತ ಮೊಟೊರೊಲಾ ಎಡ್ಜ್‌ 40 ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದವಾಗಿದೆ. ಇದೇ ಸೆಪ್ಟೆಂಬರ್ 21 ರಂದು ಅಧಿಕೃತವಾಗಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡೋದು ಪಕ್ಕಾ ಆಗಿದೆ. ಇನ್ನು ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.

ಹೌದು, ಮೊಟೊರೊಲಾ ಎಡ್ಜ್‌ 40 ನಿಯೋ ಸ್ಮಾರ್ಟ್‌ಫೋನ್‌ನ ಬೆಲೆ ವಿವರಗಳು ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ 24,999 ರೂ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ವರದಿಯಾಗಿದೆ. ಇನ್ನು ಮೊಟೊರೊಲಾ ಎಡ್ಜ್‌ 40 ನಿಯೋ ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7030 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಮೊಟೊರೊಲಾ ಎಡ್ಜ್‌ 40 ನಿಯೋ ಬೆಲೆ ಬಹಿರಂಗ! ಲಭ್ಯತೆ ಯಾವಾಗ?

ಮೊಟೊರೊಲಾ ಎಡ್ಜ್‌ 40 ನಿಯೋ ಡಿಸ್‌ಪ್ಲೇ ನಿರೀಕ್ಷೆ?
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲೆಡ್‌ ಡಿಸ್‌ಪ್ಲೇಯನ್ನು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಜೊತೆಗೆ ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದು 360Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಹೊಂದಿದ್ದು, 1,300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ 40 ನಿಯೋ ಪ್ರೊಸೆಸರ್‌ ಯಾವುದು?
ಮೊಟೊರೊಲಾ ಎಡ್ಜ್ 40 ನಿಯೋ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ಹೊಂದಿದ್ದು, ಮಾಲಿ G77 GPU ಸಪೋರ್ಟ್‌ ಪಡೆದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮೊಟೊರೊಲಾ ಎಡ್ಜ್ 40 ನಿಯೋ ಕ್ಯಾಮೆರಾ ಸೆಟ್‌ಅಪ್‌
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಬರಲಿದೆ. ಇನ್ನು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಹೊಂದಿದೆ. ಇದರೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಮೊಟೊರೊಲಾ ಎಡ್ಜ್ 40 ನಿಯೋ ಬ್ಯಾಟರಿ ಮತ್ತು ಇತರೆ
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌ ಅತ್ಯುತ್ತಮವಾಗಿರಲಿದೆ ಎನ್ನಲಾಗಿದೆ. ಲಭ್ಯ ಮಾಹಿತಿಯಂತೆ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯಲ್ಲಿ ಬರಲಿದೆ. ಇದು 68W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್, NFC, Wi-Fi ಮತ್ತು USB ಟೈಪ್-ಸಿ ಮತ್ತು ಸ್ಪೀಕರ್ ಗ್ರಿಲ್‌ನೊಂದಿಗೆ ಬರಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಗೈರೋಸ್ಕೋಪ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಅನ್ನು ಬೆಂಬಲಿಸುವ ನಿರೀಕ್ಷೆಯಿದೆ.

ಮೊಟೊರೊಲಾ ಎಡ್ಜ್ 40 ನಿಯೋ ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 40 ನಿಯೋ ಸ್ಮಾರ್ಟ್‌ಫೋನ್‌ ಭಾರತದಲ್ಲಿ 24,999ರೂ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 21ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇದು ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ ಎಂದು ಖಚಿತಪಡಿಸಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ಯಾನೆಲ್ ಬೇ, ಬ್ಲ್ಯಾಕ್ ಬ್ಯೂಟಿ ಮತ್ತು ಹಿತವಾದ ಸಮುದ್ರದ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Motorola Edge 40 Neo Price in India Tipped Ahead of Launch: Expected details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+