Home
ಸುದ್ದಿಜಾಲ

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಲಾಂಚ್‌!..ಜಬರ್ದಸ್ತ್‌ ಫೀಚರ್ಸ್‌

ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಎಡ್ಜ್‌ ಸರಣಿಯ ಸ್ಮಾರ್ಟ್‌ಫೋನ್‌ ಮೂಲಕ ಮತ್ತೊಮ್ಮೆ ಸೌಂಡ್‌ ಮಾಡುತ್ತಿದ್ದು, ಹೊಸದಾಗಿ ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಡೈಮೆನ್ಸಿಟಿ 8020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 68W ಟರ್ಬೋಪವರ್‌ ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಜೊತೆಗೆ 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಲಾಂಚ್‌!..ಜಬರ್ದಸ್ತ್‌ ಫೀಚರ್ಸ್‌

ಮೊಟೊರೊಲಾ ಎಡ್ಜ್‌ 40 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಫೋಲ್ಡ್‌ ಸ್ಕ್ರೀನ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್, 1,200 nits ಪೀಕ್ ಬ್ರೈಟ್‌ನೆಸ್ ಮತ್ತು HDR10+ ಪ್ರಮಾಣೀಕರಣವನ್ನು ಹೊಂದಿದೆ.

ಮೊಟೊರೊಲಾ ಎಡ್ಜ್‌ 40 ಪ್ರೊಸೆಸರ್‌ ಯಾವುದು?

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಲಾಂಚ್‌!..ಜಬರ್ದಸ್ತ್‌ ಫೀಚರ್ಸ್‌

ಮೊಟೊರೊಲಾ ಎಡ್ಜ್‌ 40 ಕ್ಯಾಮೆರಾ ಸೆಟ್‌ಅಪ್‌

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು OIS ಬೆಂಬಲವನ್ನು ಪಡೆದಿದೆ. ಇನ್ನು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 40 ಬ್ಯಾಟರಿ ಬ್ಯಾಕ್‌ಅಪ್‌

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಯನ್ನು ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಲಾಂಚ್‌!..ಜಬರ್ದಸ್ತ್‌ ಫೀಚರ್ಸ್‌

ಮೊಟೊರೊಲಾ ಎಡ್ಜ್‌ 40 ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಯುರೋಪ್‌ನಲ್ಲಿ ಮಾತ್ರ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಯುರೋಪ್‌ನಲ್ಲಿ EUR 599.99 (ಸುಮಾರು 54,000ರೂ)ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಲಿಪ್ಸ್ ಬ್ಲ್ಯಾಕ್, ಲೂನಾರ್ ಬ್ಲೂ ಮತ್ತು ನೆಬ್ಯುಲಾ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಗೆ ಯಾವಾಗ ಎಂಟ್ರಿ ನೀಡಲಿದೆ? ಎಂಟ್ರಿ ನೀಡಿದರೆ ಇದೇ ಫೀಚರ್ಸ್‌ ಮಾದರಿಯಲ್ಲಿ ಬರಲಿದೆಯಾ ಎಂಬೆಲ್ಲಾ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗುವ ಸಾದ್ಯತೆಗಳಿವೆ.

Best Mobiles in India

English summary
Motorola Edge 40 smartphone comes with a MediaTek Dimensity 8020 SoC paired with 8GB of LPDDR4X RAM and 256GB UFS 3.1 onboard storage.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+