ಸ್ವಾತಂತ್ರ್ಯೋತ್ಸವ ದಿನದಂದು ಈ ಸ್ಟೈಲಿಶ್ ಮೊಬೈಲ್ ಸೇಲ್ ಪ್ರಾರಂಭ; ಬೆಲೆ ಎಷ್ಟು?
ಜನಪ್ರಿಯ ಮೊಟೊರೊಲಾ (Motorola) ಸಂಸ್ಥೆಯ ನೂತನ ಮೊಟೊರೊಲಾ ಎಡ್ಜ್ 50 ( Motorola Edge 50 ) ಮೊಬೈಲ್ ಈಗಾಗಲೇ ಬೊಂಬಾಟ್ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ನಾಳೆ (ಆಗಷ್ಟ್ 15 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೊಮ್ಮೆ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಮೊಬೈಲ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕಾರ್ಯ ಮಾಡಲಿದೆ.
ಹೌದು, ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್ 50 ( Motorola Edge 50 ) ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಸೇಲ್ ಆರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 - ಫೀಚರ್ಸ್
ಮೊಟೊರೊಲಾ ಎಡ್ಜ್ 50 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಮಾಡಲಿದೆ. ಇದರ ಜೊತೆಗೆ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದೆ. ಇದು 1,900 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 50 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಇದರೊಂದಿಗೆ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಸಹ ಹೊಂದಿದೆ.
ಮೊಟೊರೊಲಾ ಎಡ್ಜ್ 50 ಸ್ಮಾರ್ಟ್‌ಫೋನ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 10 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಮೊಟೊರೊಲಾ ಎಡ್ಜ್ 50 ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ. ಈ ಮೊಬೈಲ್ ಜಂಗಲ್ ಗ್ರೀನ್ ಮತ್ತು ಪ್ಯಾಂಟೋನ್ ಪೀಚ್ ಫಜ್ ಬಣ್ಣಗಳು ವೆಗನ್ ಲೆದರ್ ಬ್ಯಾಕ್‌ನೊಂದಿಗೆ ಬರುತ್ತವೆ ಹಾಗೂ ಕೋಲಾ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








