ಆಗಷ್ಟ್ 15 ರಂದು ಈ ಸ್ಮಾರ್ಟ್‌ಫೋನ್ ಮತ್ತೆ ಖರೀದಿಗೆ ಲಭ್ಯ!..ಬೊಂಬಾಟ್ ಫೀಚರ್ಸ್!
ಮೊಟೊರೊಲಾ (Motorola) ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಮೊಟೊರೊಲಾ ಎಡ್ಜ್ 50 ( Motorola Edge 50 ) ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಮೊಬೈಲ್ ಇದೇ ಆಗಷ್ಟ್ 15 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಖರೀದಿಗೆ ಲಭ್ಯ ಆಗಲಿದೆ. ಅಂದಹಾಗೆ ಈ ಮೊಬೈಲ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ಎಡ್ಜ್ 50 ( Motorola Edge 50 ) ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೆ ಸೇಲ್ ಶುರು ಮಾಡಲಿದೆ. ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.

ಹಾಗೆಯೇ ಈ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದರ ಜೊತೆಗೆ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 - ಫೀಚರ್ಸ್
ಮೊಟೊರೊಲಾ ಎಡ್ಜ್ 50 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಮಾಡಲಿದೆ. ಇದರ ಜೊತೆಗೆ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದೆ. ಇದು 1,900 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 50 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಇದರೊಂದಿಗೆ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಸಹ ಪಡೆದಿದೆ.
ಮೊಟೊರೊಲಾ ಎಡ್ಜ್ 50 ಮೊಬೈಲ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಎರಡನೇಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 10 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊರೊಲಾ ಎಡ್ಜ್ 50 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ. ಈ ಸ್ಮಾರ್ಟ್‌ಫೋನ್ ಜಂಗಲ್ ಗ್ರೀನ್ ಮತ್ತು ಪ್ಯಾಂಟೋನ್ ಪೀಚ್ ಫಜ್ ಬಣ್ಣಗಳು ವೆಗನ್ ಲೆದರ್ ಬ್ಯಾಕ್‌ನೊಂದಿಗೆ ಬರುತ್ತವೆ ಹಾಗೂ ಕೋಲಾ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








