2000 ಡಿಸ್ಕೌಂಟ್! 5000mAh ಬ್ಯಾಟರಿ.. 32MP ಸೆಲ್ಫಿ ಕ್ಯಾಮೆರಾ.. ಈ Motorola ಫೋನಿನ ಬೆಲೆ ಭಾರೀ ಇಳಿಕೆ
ಹೊಸ ವರ್ಷಕ್ಕೆ ನಿಮ್ಮ ಗೆಳತಿಗೆ ಅಥವಾ ಮನೆಯವರಿಗೆ 5G ಸ್ಮಾರ್ಟ್‌ಫೋನ್ ಖರೀದಿಸಲು, ಬಯಸಿದರೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ. ಮೊಟೊರೊಲಾ ಹೊಸ ವರ್ಷದ ಪ್ರಯುಕ್ತ ತನ್ನ 5G ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಹೌದು, ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಮೊಬೈಲ್ ಪ್ರಸ್ತುತ, 2000 ರೂ. ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.7 ಇಂಚಿನ ಡಿಸ್‌ಪ್ಲೇ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಹಾಗೆಯೇ, 12GB RAM ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಈ ಮೊಬೈಲ್ ಖರೀದಿ ಮೇಲೆ ಶೇ.11 ರಷ್ಟು ಡಿಸ್ಕೌಂಟ್ ಲಭ್ಯವಿದೆ. ನೀವು, ಬಿಡುಗಡೆ ಬೆಲೆಗಿಂತ ಕಡಿಮೆಗೆ ಕೊಳ್ಳಬಹುದು.

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆ ಮತ್ತು ಆಫರ್‌ಗಳು
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಎರಡೂ ರೂಪಾಂತರಗಳ ಮೇಲೆ 2,000 ರೂ. ಬ್ಯಾಂಕ್ ಆಫರ್ ಲಭ್ಯವಿದೆ. ರಿಯಾಯಿತಿಯೊಂದಿಗೆ ನೀವು, ಫೋನಿನ 8GB RAM + 128GB ಸ್ಟೋರೇಜ್ ಅನ್ನು 20,999 ರೂ.ಗೆ ಮತ್ತು 12GB RAM + 256GB ಸ್ಟೋರೇಜ್ ಅನ್ನು 22,999 ರೂ.ಗೆ ಖರೀದಿಸಬಹುದು.
ಹಾಗೆಯೇ ಆಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಹಿವಾಟುಗಳಲ್ಲಿ ಬ್ಯಾಂಕ್ ಆಫರ್ ಲಭ್ಯವಿದೆ. ಕಂಪನಿಯು 16,500 ರೂ. ವರೆಗೆ ಎಕ್ಸ್‌ಚೇಂಜ್ ಆಫರ್ ಸಹ ನೀಡುತ್ತಿದೆ. ಈ ಮೊಟೊರೊಲಾ ಎಡ್ಜ್ 50 ಫ್ಯೂಷನ್‌ಗಾಗಿ ಫಾರೆಸ್ಟ್ ಬ್ಲೂ, ಮಾರ್ಷ್‌ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಬಣ್ಣ ಆಯ್ಕೆಗಳು ಲಭ್ಯವಿದೆ. ನೀವು, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳೊಂದಿಗೆ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಅನ್ನು ಕೊಳ್ಳಬಹುದು.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೀಚರ್ಸ್
ಡಿಸ್‌ಪ್ಲೇ ಹೇಗಿದೆ
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ 6.7 ಇಂಚಿನ 3D ಕರ್ವ್ಡ್ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ದರ, 1600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಮೊಟೊ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ Hello UI ನೊಂದಿಗೆ ಕೆಲಸ ಮಾಡುತ್ತದೆ. ಇದರೊಂದಿಗೆ, 3 ವರ್ಷಗಳ ಓಎಸ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳು ಲಭ್ಯವಿದೆ. ಈ ಫೋನ್ 12GB RAM + 256GB ಆಂತರಿಕ ಸ್ಟೋರೇಜ್ ಹೊಂದಿದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಹೊಂದಿದೆ.
5,000mAh ಬ್ಯಾಟರಿ ಬ್ಯಾಕಪ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








