ಇಂದು ಮೊಟೊರೊಲಾ ರೇಜರ್ 50 ಫ್ಯೂಜನ್ ಫಸ್ಟ್ ಸೇಲ್; ಬೆಲೆ ಎಷ್ಟು, ಫೀಚರ್ಸ್ ಏನು?
ಮೊಟೊರೊಲಾ ಸಂಸ್ಥೆಯು ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ 'ಮೊಟೊರೊಲಾ ರೇಜರ್ 50 ಫ್ಯೂಜನ್' ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು (ಮೇ 22 ರಂದು) ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಪ್ರಥಮ ಸೇಲ್ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 22,999ರೂ. ಆಗಿದೆ.
ಹೌದು, ಮೊಟೊ ಸಂಸ್ಥೆಯ ಇತ್ತೀಚಿನ ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನಿನ ಮೊದಲ ಮಾರಾಟ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಶುರುವಾಗಿಲಿದೆ. ಈ ಮೊಬೈಲ್ 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯವನ್ನು ಪಡೆದುಕೊಂಡಿದೆ.

ಮೊಟೊರೊಲಾ ರೇಜರ್ 50 ಫ್ಯೂಜನ್ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ರೇಜರ್ 50 ಫ್ಯೂಜನ್ ಫೀಚರ್ಸ್
ಮೊಟೊರೊಲಾ ರೇಜರ್ 50 ಫ್ಯೂಜನ್ ಮೊಬೈಲ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 1600 ನಿಟ್ಸ್ ಪೀಕ್ ಬ್ರೈಟ್ನೆಸ್, 144Hz ರಿಫ್ರೆಶ್ ರೇಟ್ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಸೌಲಭ್ಯ ಸಹ ಕಾಣಬಹುದಾಗಿದೆ
ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಅಲ್ಲದೇ ಈ ಫೋನ್ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್ ಸೌಲಭ್ಯ ಹೊಂದಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ.
ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಇದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಇದೆ.
ಇನ್ನು ಮೊಟೊರೊಲಾ ರೇಜರ್ 50 ಫ್ಯೂಜನ್ ಫೋನ್ ಮೇ 22 ರಂದು ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್ ಮಿಡ್ನೈಟ್ ಬ್ಲೂ, ಸ್ಪ್ರಿಂಗ್ ಗ್ರೀನ್ ಹಾಗೂ ಹಾಟ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯಲಿದೆ.


Click it and Unblock the Notifications








