ಭಾರತದಲ್ಲಿ ಮೊಟೊರೊಲಾ ರೇಜರ್ 50 ಅಲ್ಟ್ರಾ ಲಾಂಚ್; 32ಎಂಪಿ ಸೆಲ್ಫಿ ಕ್ಯಾಮೆರಾ!
ಮೊಟೊರೊಲಾ ಸಂಸ್ಥೆಯ ಬಹುನಿರೀಕ್ಷಿತ ಮೊಟೊರೊಲಾ ರೇಜರ್ 50 ಅಲ್ಟ್ರಾ ಸ್ಮಾರ್ಟ್‌ಫೋನ್ ಇಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಿದೆ. ಈ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ಹೈಲೈಟ್ ಅಂಶಗಳಲ್ಲಿ ಒಂದಾಗಿದೆ.
ಹೌದು, ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ರೇಜರ್ 50 ಅಲ್ಟ್ರಾ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ 3D ಕರ್ವ್ಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರೊಂದಿಗೆ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಪಡೆದಿದೆ. ಹಾಗಾದರೇ ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನಿನ ಇತರೆ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ರೇಜರ್ 50 ಅಲ್ಟ್ರಾ ಫೀಚರ್ಸ್
ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 1600 ನಿಟ್ಸ್ ಪೀಕ್ ಬ್ರೈಟ್ನೆಸ್, 144Hz ರಿಫ್ರೆಶ್ ರೇಟ್ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಸೌಲಭ್ಯ ಸಹ ಕಾಣಬಹುದಾಗಿದೆ
ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಅಲ್ಲದೇ ಈ ಫೋನ್ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ.
ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಇದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಇರಲಿವೆ.
ಬೆಲೆ ಹಾಗೂ ಲಭ್ಯತೆ
8GB + 128GB ವೇರಿಯಂಟ್ ಬೆಲೆಯು 22,999ರೂ. ಆಗಿದೆ
12GB + 256GB ವೇರಿಯಂಟ್ ಬೆಲೆಯು 24,999ರೂ. ಆಗಿದೆ
ಇನ್ನು ಈ ಫೋನ್ ಮೇ 22 ರಂದು ಮಾರಾಟ ಪ್ರಾರಂಭ ಮಾಡಲಿದ್ದು, ಇದು ಮಿಡ್ನೈಟ್ ಬ್ಲೂ, ಸ್ಪ್ರಿಂಗ್ ಗ್ರೀನ್ ಹಾಗೂ ಹಾಟ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿಸಬಹುದು. ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಸಹ ಲಭ್ಯವಾಗಲಿದೆ.


Click it and Unblock the Notifications








