Home
ಸುದ್ದಿಜಾಲ

ಮುಂದಿನ ವಾರವೇ ಲಾಂಚ್‌ ಆಗಲಿದೆ ಮೊಟೊದ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌!

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಮೊಟೊರೊಲಾ ಸಂಸ್ಥೆಯು ಇತ್ತೀಚಿಗೆ ಮೊಟೊರೊಲಾ ಎಡ್ಜ್‌ 50 ಪ್ರೊ ಫೋನ್‌ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಮತ್ತೆ ಎಡ್ಜ್‌ 50 ಸರಣಿಯಲ್ಲಿ ಹೊಸದೊಂದು ಫೋನ್‌ ಲಾಂಚ್‌ಗೆ ಸಜ್ಜಾಗಿದೆ. ಅದುವೇ ಮೊಟೊರೊಲಾ ಎಡ್ಜ್‌ 50 ಫ್ಯೂಶನ್ (Motorola Edge 50 Fusion) ಸ್ಮಾರ್ಟ್‌ಫೋನ್‌ ಆಗಿದೆ.

ಹೌದು, ಸಂಸ್ಥೆಯ ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಫೋನ್‌ ಮುಂದಿನ ವಾರವೇ ದೇಶಿಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಲಾಂಚ್ ಕುರಿತಾಗಿ ಈಗಾಗಲೇ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೈಕ್ರೋ ಪೇಜ್‌ ಸಹ ಪ್ರಾರಂಭ ಮಾಡಿದೆ. ಇನ್ನು ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7s ಜೆನ್‌ 2 ಪ್ರೊಸೆಸರ್‌ ಬಲ ಪಡೆದಿರಲಿದೆ.

ಮುಂದಿನ ವಾರವೇ ಲಾಂಚ್‌ ಆಗಲಿದೆ ಮೊಟೊದ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌!

ಅಲ್ಲದೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಸಹ ಪಡೆದಿದೆ. ಇನ್ನು ಈ ಫೋನ್‌ ಫಾರೆಸ್ಟ್ ಬ್ಲೂ, ಮಾರ್ಷ್ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಫೋನಿನ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ - ನಿರೀಕ್ಷಿತ ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಒಳಗೊಂಡಿರಲಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿರಲಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2000 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಬರಲಿದ್ದು, 3D ಕರ್ವ್‌ ಡಿಸ್‌ಪ್ಲೇ ರಚನೆ ಅನ್ನು ಹೊಂದಿರಲಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 2 SoC ಪ್ರೊಸೆಸರ್‌ ಬೆಂಬಲ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇರಲಿದೆ. ಇದರೊಂದಿಗೆ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದಿರಲಿದೆ. ಆದರೆ ಇದರಲ್ಲಿ ಎಸ್‌ಡಿ ಕಾರ್ಡ್‌ ಸ್ಲಾಟ್‌ ಸೌಲಭ್ಯ ಅಲಭ್ಯ ಎಂದು ಹೇಳಲಾಗುತ್ತಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿರಲಿದೆ. ಸೆಕೆಂಡರಿ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇರಲಿದೆ. ಹಾಗೆಯೇ 50 ಅಥವಾ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 68W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಪಡೆದಿರಲಿದೆ. ಹಾಗೆಯೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಇರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ.

ಮೊಟೊರೊಲಾ ಎಡ್ಜ್‌ 50 ಫ್ಯೂಶನ್ ಸ್ಮಾರ್ಟ್‌ಫೋನ್‌ ಮುಂದಿನ ವಾರ ಅಧಿಕೃತವಾಗಿ ಮಾರುಕಟ್ಟೆ ಲಗ್ಗೆ ಇಡಲಿದೆ. ಈ ಫೋನ್‌ ಫಾರೆಸ್ಟ್ ಬ್ಲೂ, ಮಾರ್ಷ್ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಬಣ್ಣಗಳ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಇರುವ ಸಾಧ್ಯತೆ ಇವೆ.

Best Mobiles in India

English summary
Motorola Edge 50 Fusion launching in India next week: Specifications and more. check out features, price, sale and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+