Home
ಸುದ್ದಿಜಾಲ

ವೇಗದ ಪ್ರೊಸೆಸರ್‌, ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ಗೆ ಈಗ ಬಿಗ್‌ ಡಿಸ್ಕೌಂಟ್‌!

ಲೀಡಿಂಗ್ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ (Flipkart) ತಾಣದಲ್ಲಿ ನಲ್ಲಿ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳು ಗಮನಾರ್ಹ ರಿಯಾಯಿತಿ ಪಡೆದಿವೆ. ಫ್ಲಿಪ್‌ಕಾರ್ಟ್‌ನ ಈ ವಿಶೇ‍ಷ ಮಾರಾಟದಲ್ಲಿ ಆಫರ್‌ ಪಡೆದ ಫೋನ್‌ಗಳ ಪೈಕಿ ಫೋನ್‌ಗಳ ಜೊತೆಗೆ ಕೆಲವು ನೂತನ ಮೊಬೈಲ್‌ ಸಹ ಸೇರಿವೆ. ಅವುಗಳ ಪೈಕಿ ಮೊಟೊರೊಲಾ ಕಂಪನಿಯ ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ (Motorola Edge 50 Fusion) ಸ್ಮಾರ್ಟ್‌ಫೋನ್‌ ಅತ್ಯುತ್ತಮ ಕೊಡುಗೆ ದರದಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ (Flipkart) ಪ್ಲಾಟ್‌ಫಾರ್ಮ್ ನಲ್ಲಿ ಇದೀಗ ಮೊಟೊರೊಲಾ ಬ್ರ್ಯಾಂಡ್‌ನ ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ (Motorola Edge 50 Fusion) ಮೊಬೈಲ್‌ ಶೇ. 11% ರಷ್ಟು ಆಫರ್‌ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ವೇರಿಯಂಟ್‌ 22,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಮೊಬೈಲ್‌ ಅನ್ನು ಇನ್ನಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದು.

ವೇಗದ ಪ್ರೊಸೆಸರ್‌, ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ಗೆ ಈಗ ಬಿಗ್‌ ಡಿಸ್ಕೌಂಟ

ಅಂದಹಾಗೆ ಈ ಮೊಬೈಲ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಪಡೆದಿದೆ. ಅಲ್ಲದೇ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ - ಫೀಚರ್ಸ್‌ ಮಾಹಿತಿ

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಮೊಬೈಲ್‌ 6.7 ಇಂಚಿನ 3D ಕರ್ವ್ಡ್‌ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನಿನ 1600 ನಿಟ್ಸ್‌ ಪೀಕ್ ಬ್ರೈಟ್ನೆಸ್‌, 144Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನ್‌ ಕ್ವಾಲ್ಕಮ್‌ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್‌ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ಫ್ಯೂಜನ್‌ ಫೋನ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಮತ್ತು ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಪಡೆದಿದೆ. ಹಾಗೆಯೇ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಸಹ ಕಾಣಬಹುದಾಗಿದೆ.

Best Mobiles in India

English summary
Motorola Edge 50 Fusion Price Reduced on Flipkart website. check Offer Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+