Home
ಸುದ್ದಿಜಾಲ

ಇಂದು ಮತ್ತೆ ಮೊಟೊರೊಲಾ ರೇಜರ್ 50 ಅಲ್ಟ್ರಾ ಸೇಲ್‌; ಆಫರ್‌ ಏನಿದೆ!

ಮೊಟೊರೊಲಾ ಮೊಬೈಲ್‌ ಬ್ರ್ಯಾಂಡ್‌ ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಲಾಂಚ್ ಮಾಡಿರುವ ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ ಸ್ಟೈಲಿಶ್‌ ಡಿಸೈನ್‌ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಇನ್ನು ಈ ಮೊಬೈಲ್‌ ಇಂದು (ಮೇ 28 ರಂದು) ಸಂಜೆ 5 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಮತ್ತೆ ಮಾರಾಟ ಪ್ರಾರಂಭ ಮಾಡಲಿದೆ.

ಹೌದು, ಮೊಟೊರೊಲಾ ಕಂಪನಿಯ ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಇಂದು ಸಂಜೆ ಮಾರಾಟ ಶುರು ಮಾಡಲಿದೆ. ಈ ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದರೊಂದಿಗೆ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಪಡೆದಿದೆ.

ಇಂದು ಮತ್ತೆ ಮೊಟೊರೊಲಾ ರೇಜರ್ 50 ಅಲ್ಟ್ರಾ ಸೇಲ್‌; ಆಫರ್‌ ಏನಿದೆ!

ಇನ್ನು ಈ ಮೀಡ್‌ರೇಂಜ್‌ ಫೋನ್‌ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದರೊಂದಿಗೆ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೀಚರ್ಸ್ ಹೀಗಿವೆ

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್‌ 6.7 ಇಂಚಿನ 3D ಕರ್ವ್ಡ್‌ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 1600 ನಿಟ್ಸ್‌ ಪೀಕ್ ಬ್ರೈಟ್ನೆಸ್‌, 144Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 7s ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್‌ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್‌ 5,000 mAh ಬ್ಯಾಟರಿ ಸೌಲಭ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಇದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2 ಹಾಗೂ ಯುಎಸ್‌ಬಿ 2.0 ಟೈಪ್ - C ಪೋರ್ಟ್ ಆಯ್ಕೆಗಳು ಸಹ ಇವೆ.

ಇಇನ್ನು ಈ ಫೋನ್‌ ಅನ್ನು ಮಿಡ್ನೈಟ್ ಬ್ಲೂ, ಸ್ಪ್ರಿಂಗ್ ಗ್ರೀನ್ ಹಾಗೂ ಹಾಟ್ ಪಿಂಕ್ ಕಲರ್‌ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಆಸಕ್ತ ಖರೀದಿದಾರರು ಇದನ್ನು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಖರೀದಿಸಬಹುದು. ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ಲಭ್ಯವಾಗಲಿದೆ.

Best Mobiles in India

English summary
Motorola Edge 50 Fusion Sale Today via Flipkart. check Price, Offers and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+