Home
ಸುದ್ದಿಜಾಲ

ಇಂದು Motorola Edge 50 Neo ಸೇಲ್‌; ಬಜೆಟ್‌ ಬೆಲೆ, ಆಫರ್‌ ಸಹ ಇದೆ!

ಲೀಡಿಂಗ್‌ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಮೊಟೊರೊಲಾ ಸಂಸ್ಥೆಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ಮೊಟೊರೊಲಾ ಎಡ್ಜ್‌ 50 ನಿಯೋ (Motorola Edge 50 Neo) ಮೊಬೈಲ್‌ ಈಗಾಗಲೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮಾರಾಟ ಕಂಡಿದೆ. ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನಿನ ಸ್ಪೆಷಲ್‌ ಸೇಲ್‌ ನಾಳೆ (ಸೆಪ್ಟೆಂಬರ್ 24 ರಂದು) ಮತ್ತೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ ಮೂಲಕ ಪ್ರಾರಂಭ ಮಾಡಲಿದೆ.

ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ನಾಳೆ (ಸೆಪ್ಟೆಂಬರ್ 24 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ವಿಶೇಷ ಸೇಲ್‌ ಶುರು ಮಾಡಲಿದೆ. ಅಂದಹಾಗೆ ಈ ಫೋನಿನ 8 GB RAM + 256 GB ವೇರಿಯಂಟ್‌ ಆಫರ್‌ ಬೆಲೆಯು 23,999ರೂ. ಆಗಿದೆ.

ಇಂದು Motorola Edge 50 Neo ಸೇಲ್‌; ಬಜೆಟ್‌ ಬೆಲೆ, ಆಫರ್‌ ಸಹ ಇದೆ!

ಈ ನೂತನ ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಲಸಿದೆ. ಹಾಗಾದರೇ ಮೊಟೊರೊಲಾ ಎಡ್ಜ್‌ 50 ನಿಯೋ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್‌ 50 ನಿಯೋ - ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ನಿಯೋ ಮೊಬೈಲ್ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ ರಚನೆ ಅನ್ನು ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ನಿಯೋ (Motorola Edge 50 Neo) ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಕಾಣಬಹುದಾಗಿದೆ. ಇದರೊಂದಿಗೆ 8 GB RAM + 256 GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆ ಸಹ ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 10 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪವರ್‌ನಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ನಿಯೋ ಫೋನ್‌ 4310 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಒಳಗೊಂಡಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇವೆ.

ಮೊಟೊರೊಲಾ ಎಡ್ಜ್‌ 50 ನಿಯೋ (Motorola Edge 50 Neo) ಫೋನ್‌ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ ನಾಟಿಕಲ್ ಬ್ಲೂ, ಲ್ಯಾಟೆ, ಗ್ರಿಸೈಲ್ಲೆ ಮತ್ತು ಪೊಯಿನ್ಸಿಯಾನಾ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Motorola Edge 50 Neo again goes sale in India Today via flipkart. Check offer, Price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+