Home
ಸುದ್ದಿಜಾಲ

ಇಂದು ಮೊಟೊದ 3D ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಫೋನಿನ ಸೇಲ್‌ ಆರಂಭ!..ಬೆಲೆ ಎಷ್ಟು?

ಲೀಡಿಂಗ್‌ ಮೊಬೈಲ್‌ ಸಂಸ್ಥೆಗಳಲ್ಲಿ ಒಂದೆನಿಸಿರುವ ಮೊಟೊರೊಲಾ ಕಂಪನಿಯು ಇತ್ತೀಚಿಗೆ ಲಾಂಚ್ ಮಾಡಿರುವ ಮೊಟೊರೊಲಾ ಎಡ್ಜ್‌ 50 ಪ್ರೊ (Motorola Edge 50 Pro 5G) ಮೊಬೈಲ್‌ ಈಗಾಗಲೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಮಾರಾಟ ಕಂಡಿದೆ. ಇದೀಗ ಈ ಮೊಬೈಲ್‌ ಇಂದು (ಜುಲೈ 6 ರಂದು) ಮತ್ತೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ಮೂಲಕ ಸೇಲ್‌ ಶುರು ಮಾಡಲಿದೆ. ಅಂದಹಾಗೆ ಇದು ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ.

ಹೌದು, ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ಎಡ್ಜ್‌ 50 ಪ್ರೊ (Motorola Edge 50 Pro 5G) ಫೋನ್‌ ಲುಕ್‌ ಹಾಗೂ ಕೆಲವು ಫೀಚರ್ಸ್‌ಗಳಿಂದ ಗ್ರಾಹಕರನ್ನು ಮೋಡಿ ಮಾಡಿದೆ. ಈ ಫೋನ್ ಇಂದು ಮತ್ತೊಮ್ಮೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ವಿಶೇ‍ಷ ಸೇಲ್‌ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್‌ನ 8 GB RAM + 256 GB ವೇರಿಯಂಟ್‌ ಬೆಲೆಯು 31,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಇದೆ.

ಇಂದು ಮೊಟೊದ 3D ಕರ್ವ್ಡ್‌ ಡಿಸ್‌ಪ್ಲೇ ಇರುವ ಈ ಫೋನಿನ ಸೇಲ್‌ ಆರಂಭ!..ಬೆಲೆ ಎಷ್ಟು?

ಅಲ್ಲದೇ ಈ ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ನಲ್ಲಿ ಇದೆ. ಹಾಗಾದರೇ ಮೊಟೊರೊಲಾ ಎಡ್ಜ್‌ 50 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ ಎಡ್ಜ್‌ 50 ಪ್ರೊ - ಫೀಚರ್ಸ್‌

ಮೊಟೊ ಎಡ್ಜ್‌ 50 ಪ್ರೊ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಹೊಂದಿದೆ. ಇದರೊಂದಿಗೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದಿದ್ದು, 3D ಕರ್ವ್‌ ಡಿಸ್‌ಪ್ಲೇ ರಚನೆ ಪಡೆದಿದೆ.

ಮೊಟೊ ಎಡ್ಜ್‌ 50 ಪ್ರೊ ಮೊಬೈಲ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಹೊಂದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಹೊಂದಿದೆ.

ಮೊಟೊ ಎಡ್ಜ್‌ 50 ಪ್ರೊ ಮೊಬೈಲ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ದ್ವಿತೀಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇದು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯದ ಆಯ್ಕೆ ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.

ಅಲ್ಲದೇ ಈ ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ ಮೂನ್ಲೈಟ್ ಪರ್ಲ್, ಲಕ್ಸ್ ಲ್ಯಾವೆಂಡರ್ ಮತ್ತು ಬ್ಲ್ಯಾಕ್ ಬ್ಯೂಟಿ ಬಣ್ಣಗಳ ಆಯ್ಕೆಗಳಲ್ಲಿ ಖರೀದಿ ಮಾಡಲು ಅವಕಾಶ ಇದ್ದು, ಇಂದು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಪೆಷಲ್‌ ಸೇಲ್‌ ಪ್ರಾರಂಭವಾಗಲಿದೆ.

Best Mobiles in India

English summary
Motorola Edge 50 Pro 5G again sale today via flipkart. Check offer, price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+