ಇಂದು ಮೊಟೊರೊಲಾ ಎಡ್ಜ್ 50 ಪ್ರೊ ಫಸ್ಟ್ ಸೇಲ್!..ಡಿಸ್ಕೌಂಟ್ ಇದೆಯಾ?
ಮೊಟೊ ಕಂಪನಿಯು ನೂತನವಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ 'ಮೊಟೊರೊಲಾ ಎಡ್ಜ್ 50 ಪ್ರೊ' ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು (ಏಪ್ರಿಲ್ 9) ರಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 27,999ರೂ. ಆಗಿದೆ.
ಹೌದು, ಮೊಟೊ ಸಂಸ್ಥೆಯ ಇತ್ತೀಚಿನ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಮೊದಲ ಮಾರಾಟ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಶುರುವಾಗಿಲಿದೆ. ಈ ಫೋನ್ 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯವನ್ನು ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 4500 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ಪ್ರೊ - ಫೀಚರ್ಸ್ ಹೀಗಿವೆ
ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆದಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಕೂಡಾ ಇದೆ.
ಮೊಟೊ ಎಡ್ಜ್ 50 ಪ್ರೊ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದ್ದು, ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯ ಒದಗಿಸಿಲ್ಲ.
ಮೊಟೊ ಎಡ್ಜ್ 50 ಪ್ರೊ ಫೋನ್ ಮೂರು ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇನ್ನು ಈ ಫೋನ್ 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಎನಿಸಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಸಪೋರ್ಟ್ ಆಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.
ಇನ್ನು ಈ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಆರಂಭಿಕ ಕೊಡುಗೆಯ ಬೆಲೆಯು 29,999ರೂ. ಗಳು ಆಗಿದೆ. ಗ್ರಾಹಕರು ಈ ಫೋನ್ ಮೂನ್ಲೈಟ್ ಪರ್ಲ್, ಲಕ್ಸ್ ಲ್ಯಾವೆಂಡರ್ ಮತ್ತು ಬ್ಲ್ಯಾಕ್ ಬ್ಯೂಟಿ ಬಣ್ಣಗಳ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಫಸ್ಟ್ ಸೇಲ್ ಏಪ್ರಿಲ್ 9 ರಂದು ಪ್ರಾರಂಭವಾಗಲಿದೆ.


Click it and Unblock the Notifications








