Home
ಸುದ್ದಿಜಾಲ

ಮೊಟೊರೊಲಾ ಎಡ್ಜ್‌ 50 ಪ್ರೊ ಬೆಲೆಯಲ್ಲಿ ಭರ್ಜರಿ ಇಳಿಕೆ; ಉಳಿತಾಯ ಖಚಿತ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ ಬಿಗ್ ಸೇವಿಂಗ್‌ ಡೇಸ್‌ ಮಾರಾಟವನ್ನು ವಿಸ್ತರಿಸಿದ್ದು, ಹೊಸ ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಖುಷಿ ಎನಿಸಿದೆ. ಈ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್‌ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ ಸಹ ಅತ್ಯುತ್ತಮ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ.

ಹೌದು, ದಿಗ್ಗಜ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮೊಟೊರೊಲಾ ಎಡ್ಜ್‌ 50 ಪ್ರೊ (Motorola Edge 50 Pro 5G) ಫೋನ್‌ ಶೇ. 23% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಅನ್ನು ಗ್ರಾಹಕರು 33,999ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಲು ಚಾನ್ಸ್‌ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಪಡೆಯಬಹುದು.

ಮೊಟೊರೊಲಾ ಎಡ್ಜ್‌ 50 ಪ್ರೊ ಬೆಲೆಯಲ್ಲಿ ಭರ್ಜರಿ ಇಳಿಕೆ; ಉಳಿತಾಯ ಖಚಿತ!

ಅಂದಹಾಗೆ ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಸಹ ಹೊಂದಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಪ್ರೊ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ ಎಡ್ಜ್‌ 50 ಪ್ರೊ ಮೊಬೈಲ್‌ ಫೀಚರ್ಸ್‌ ಮಾಹಿತಿ

ಮೊಟೊರೊಲಾ ಎಡ್ಜ್‌ 50 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದಿದ್ದು, 3D ಕರ್ವ್‌ ಡಿಸ್‌ಪ್ಲೇ ಸೆಟ್‌ಅಪ್‌ ಹೊಂದಿದೆ.

ಮೊಟೊ ಎಡ್ಜ್‌ 50 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಮೊಟೊ ಎಡ್ಜ್‌ 50 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇದು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಸ್ಮಾರ್ಟ್‌ಫೋನ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯದ ಆಯ್ಕೆ ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

English summary
Motorola Edge 50 Pro 5G Receive massive price cut on flipkart. check offer details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+