3D ಕರ್ವ್ ಡಿಸ್‌ಪ್ಲೇ ಇರುವ ಈ ಫೋನ್ ಇಂದು ಮತ್ತೆ ಖರೀದಿಗೆ ಲಭ್ಯ!
ಮೊಟೊರೊಲಾ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ 'ಮೊಟೊರೊಲಾ ಎಡ್ಜ್ 50 ಪ್ರೊ' ಈಗಾಗಲೇ ಫ್ಲಿಪ್‌ಕಾರ್ಟ್ ತಾಣದ ಮೂಲಕ ಫಸ್ಟ್ ಸೇಲ್ ಕಂಡಿದೆ. ಕೆಲವೊಂದು ಫೀಚರ್ಸ್ ಗಳಿಂದ ಗ್ರಾಹಕರನ್ನು ಆಕರ್ಷಿಸಿರುವ ಈ ಫೋನ್ ಇಂದು (ಏಪ್ರಿಲ್ 11) ರಂದು ಮತ್ತೆ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭ ಮಾಡಲಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಇಂದು ಮತ್ತೆ ಮಾರಾಟ ಆರಂಭಿಸಲಿದೆ. ಇನ್ನು ಈ ಫೋನ್ 12 GB RAM ಮತ್ತು 256 GB ವೇರಿಯಂಟ್ ಆಯ್ಕೆ ಹೊಂದಿದ್ದು, ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್ ನಲ್ಲಿ ಕೆಲಸ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಆಫರ್ ದರವು 27,999 ರೂ. ಆಗಿದೆ.

ಇನ್ನು ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ 4500 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಇದು ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್ 50 ಪ್ರೊ - ಫೀಚರ್ಸ್ ಮಾಹಿತಿ
ಮೊಟೊರೊಲಾ ಸಂಸ್ಥೆಯ ಈ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಹಾಗೆಯೇ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆದಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಕೂಡಾ ಇದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಪವರ್ ಅನ್ನು ಪಡೆದಿದ್ದು, ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ದಲ್ಲಿ ಇವೆ. ಇನ್ನು ಈ ಫೋನ್ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವುದು ಪ್ಲಸ್ ಪಾಯಿಂಟ್ ಎನಿಸಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಸಪೋರ್ಟ್ ಆಗಿ 125 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಬ್ಯ ಸಹ ಇದೆ. ಹಾಗೆಯೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








