ಇಂದು ಎಂಟ್ರಿ ಕೊಡಲಿದೆ ಮೊಟೊರೊಲಾ ಎಡ್ಜ್ 50 ಪ್ರೊ!..ಈ ಫೋನ್ ಕ್ಲಿಕ್ ಆಗುತ್ತಾ?
ಮೊಟೊರೊಲಾ ಮೊಬೈಲ್ ಕಂಪನಿಯ ನೂತನ ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಇಂದು (ಏಪ್ರಿಲ್ 3 ರಂದು) ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈ ಹೊಸ ಸ್ಮಾರ್ಟ್‌ಫೋನ್ ಮೀಡ್‌ರೇಂಜ್ ಪ್ರೈಸ್ ಟ್ಯಾಗ್ ಪಡೆದಿರುವ ನಿರೀಕ್ಷೆಗಳು ಇದ್ದು, ಕೆಲವು ಅತ್ಯಾಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ.
ಹೌದು, ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ನಾಳೆ ಲಾಂಚ್ ಆಗಲಿದೆ. ಈ ಮೊಬೈಲ್ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್ ಪಡೆದಿದೆ.

ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿರಲಿದ್ದು, ಅಲ್ಲದ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿರುವುದು ಖಚಿತ ಎನ್ನಲಾಗಿದೆ. ಅದೇ ರೀತಿ 50 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದಿರುವ ಸಾಧ್ಯತೆ ಇದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್‌ನ ಇತರೆ ನಿರೀಕ್ಷಿತ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ಪ್ರೊ - ನಿರೀಕ್ಷಿತ ಫೀಚರ್ಸ್ ಹೀಗಿವೆ
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಒಳಗೊಂಡಿರಲಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿರುತ್ತದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿರಲಿದ್ದು, ಹಾಗೆಯೇ ಇದರ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಇರಲಿದೆ. ಅಲ್ಲದೇ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿರಲಿದೆ.

ಮೊಟೊರೊಲಾದ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಬಲವನ್ನು ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇರಲಿದೆ. ಇದರೊಂದಿಗೆ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿರಲಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯ ಇರುವುದಿಲ್ಲ ಎಂದು ವರದಿಯಾಗಿದೆ.
ಮೊಟೊರೊಲಾ ಸಂಸ್ಥೆಯ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿರಲಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಎನ್ನಲಾಗಿದೆ. ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿರಲಿವೆ. ಪ್ರಮುಖ ಹೈಲೈಟ್ ಅಂದ್ರೆ, ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ.
ಈ ನೂತನ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇರಲಿದೆ. ಹಾಗೆಯೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಇರುವ ನಿರೀಕ್ಷೆಯಿದೆ. ಅಂದಹಾಗೆ ಈ ಫೋನ್ ಮೀಡ್‌ರೇಂಜ್‌ನಲ್ಲಿ ಸದ್ದು ಮಾಡುವ ಸೂಚನೆಗಳು ಇವೆ.
ಅಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಕಾಣಬಹುದಾಗಿದೆ. ಅಂದಹಾಗೆ ಈ ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಇಂದು (ಏಪ್ರಿಲ್ 3 ರಂದು) ಅಧಿಕೃತವಾಗಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಇನ್ನು ಈ ಫೋನ್ ವೈಟ್, ಪರ್ಪಲ್ ಹಾಗೂ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ಸಾಧ್ಯತೆಗಳು ಅಧಿಕ.


Click it and Unblock the Notifications








