ಬಿಡುಗಡೆಗೂ ಮುನ್ನವೇ ಮೊಟೊರೊಲಾ ಎಡ್ಜ್ 50 ಪ್ರೊ ಫೀಚರ್ಸ್ ಬಹಿರಂಗ: ಏನೆಲ್ಲಾ ನಿರೀಕ್ಷೆ
ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಕ್ರಿಯೆಟ್ ಮಾಡಿವೆ. ಯುವಜನರನ್ನೇ ಟಾರ್ಗೆಟ್ ಮಾಡಿ ಎಂಟ್ರಿ ನೀಡುವ ಈ ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ಇದರ ಮುಂದುವರೆದ ಭಾಗವೆಂಬಂತೆ ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್ ಮೊಟೊರೊಲಾ ಎಡ್ಜ್ 50 ಪ್ರೊ ಬಿಡುಗಡೆಗೆ ತಯಾರಿ ನಡೆದಿದೆ.
ಹೌದು, ಭಾರತಕ್ಕೆ ಎಂಟ್ರಿ ನೀಡಲು ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಏಪ್ರಿಲ್ 3 ರಂದು ಬಿಡುಗಡೆ ಆಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಹಾಗಾದ್ರೆ ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ ಹೇಗಿದೆ?
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 451 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಸಹ ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ಲಸ್ ಪ್ರೊಟೆಕ್ಷನ್ ಹೊಂದಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಪ್ರೊಸೆಸರ್ ನಿರೀಕ್ಷೆ ಏನು?
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಸಹ ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವುದೇ ರೀತಿಯ ಮೆಮೊರಿ ಕಾರ್ಡ್ ಸ್ಲಾಟ್ ನೀಡಿರುವುದಿಲ್ಲ ಎಂದು ವರದಿಯಾಗಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಕ್ಯಾಮೆರಾ ಸೆಟಪ್ ಏನಿದೆ?
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಇರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗುವುದು ಎಂಬ ಸುದ್ದಿ ಮೊಟೊರೊಲಾ ಸಂಸ್ಥೆ ಅಂಗಳದಿಂದ ಬಂದಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಬ್ಯಾಟರಿ ಮತ್ತು ಇತರೆ ಫೀಚರ್ಸ್
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ 4600 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು. ಇದು 120W ಫಾಸ್ಟ್ ಚಾರ್ಜಿಂಗ್, 50W ವೈರ್‌ಲೆಸ್ ಚಾರ್ಜಿಂಗ್
5W ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಅನ್ನು ಹೊಂದಿರಲಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಬೆಲೆ ನಿರೀಕ್ಷೆ ಏನು
ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಸಾಧ್ಯತೆಯಿದೆ. ಆದರೆ ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾದ ನಂತರ ಇದರ ಬೆಲೆಯ ವಿವರಗಳು ಬಹಿರಂಗವಾಗಲಿದೆ. ಇದು ಕಪ್ಪು, ಬಿಳಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಬರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಎರಡನೇಯದು ಫಾಕ್ಸ್ ಲೆದರ್ ಫಿನಿಶ್ ಅನ್ನು ಹೊಂದಿರುತ್ತದೆ.


Click it and Unblock the Notifications








