125W ಫಾಸ್ಟ್ ಚಾರ್ಜಿಂಗ್ ಇರುವ ಈ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ;..ಸಖತ್ ಆಫರ್!
ಲೀಡಿಂಗ್ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಇದೀಗ ಫ್ಲಿಪ್‌ಕಾರ್ಟ್ ಬಿಗ್ ಶಾಪಿಂಗ್ ಉತ್ಸವ ಸೇಲ್ ( Flipkart Big Shopping Utsav Sale) ಅನ್ನು ಘೋಷಿಸಿದ್ದು, ಆನ್‌ಲೈನ್ ಶಾಪಿಂಗ್ ಗ್ರಾಹಕರಿಗೆ ಭಾರೀ ಸಂತಸ ತಂದಿದೆ. ಈ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಆಗಲಿವೆ. ಅವುಗಳ ಪೈಕಿ ಸ್ಟೈಲಿಶ್ ಮೊಟೊ ಎಡ್ಜ್ 50 ಪ್ರೊ ಫೋನ್ ಭಾರೀ ಆಫರ್ ದರದಲ್ಲಿ ಲಭ್ಯವಾಗಲಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಶಾಪಿಂಗ್ ಉತ್ಸವ ಸೇಲ್ ( Flipkart Big Shopping Utsav Sale) ಮಾರಾಟದ ವೇಳೆ ಮೊಟೊ ಎಡ್ಜ್ 50 ಪ್ರೊ (Moto Edge 50 Pro) ಮೊಬೈಲ್ 28% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 12 GB RAM + 256 GB ವೇರಿಯಂಟ್ 29,999ರೂ. ಗಳ ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಯ್ದ ಬ್ಯಾಂಕ್ ಕೊಡುಗೆಗಳು ಸಹ ಸಿಗಲಿವೆ.

ಇನ್ನು ಈ ಸ್ಮಾರ್ಟ್‌ಫೋನ್ ಮೂನ್ಲೈಟ್ ಪರ್ಲ್, ಲಕ್ಸ್ ಲ್ಯಾವೆಂಡರ್ ಮತ್ತು ಬ್ಲ್ಯಾಕ್ ಬ್ಯೂಟಿ ಕಲರ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು125W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ವನ್ನು ಪಡೆದಿದೆ. ಇನ್ನುಳಿದಂತೆ ಮೊಟೊ ಎಡ್ಜ್ 50 ಪ್ರೊ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಮೊಟೊ ಎಡ್ಜ್ 50 ಪ್ರೊ - ಫೀಚರ್ಸ್
ಮೊಟೊ ಎಡ್ಜ್ 50 ಪ್ರೊ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಇಳಗೊಂಡಿದ್ದು, ಇದು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಹೊಂದಿದೆ. ಇದರೊಂದಿಗೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆದಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಪಡೆದಿದೆ.
ಮೊಟೊ ಎಡ್ಜ್ 50 ಪ್ರೊ ಫೋನ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಪವರ್ ಅನ್ನು ಹೊಂದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಹೊಂದಿದೆ.
ಮೊಟೊ ಎಡ್ಜ್ 50 ಪ್ರೊ ಫೋನ್ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ದ್ವಿತೀಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿವೆ. ಇದು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ.
ಮೊಟೊ ಎಡ್ಜ್ 50 ಪ್ರೊ ಫೋನ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯದ ಆಯ್ಕೆ ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








