ಮೊಟೊರೊಲಾ ಎಡ್ಜ್ 50 ಪ್ರೊ ಫೋನ್ ಲಾಂಚ್!..ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
ಜನಪ್ರಿಯ ಮೊಟೊರೊಲಾ ಮೊಬೈಲ್ ಕಂಪನಿಯ ತನ್ನ ಎಡ್ಜ್ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಆ ಸಾಲಿಗೆ ಈಗ ಹೊಸದಾಗಿ ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ಈ ನೂತನ ಫೋನ್ ಈ ಹಿಂದಿನ ಮೊಟೊ ಎಡ್ಜ್ 40 ಪ್ರೊ ಫೋನಿನ ಉತ್ತರಾಧಿಕಾರಿ ಆಗಿ ಮಾರುಕಟ್ಟೆ ಪ್ರವೇಶಿಸಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಹೊಸ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 12 GB RAM + 256 GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.

ಅಂದಹಾಗೆ ಈ ಫೋನ್ ಮೊಟೊ ಎಐ ಆಯ್ಕೆಯೊಂದಿಗೆ ಪ್ರವೇಶಿಸಿದ್ದು, ಇದರ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಮತ್ತು 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ಫೋನ್ ಮೂನ್ಲೈಟ್ ಪರ್ಲ್, ಲಕ್ಸ್ ಲ್ಯಾವೆಂಡರ್ ಮತ್ತು ಬ್ಲ್ಯಾಕ್ ಬ್ಯೂಟಿ ಬಣ್ಣಗಳ ಆಯ್ಕೆ ಲಭ್ಯ. ಹಾಗಾದರೇ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ಪ್ರೊ - ಫೀಚರ್ಸ್
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಹೊಂದಿದೆ. ಇದಲ್ಲದೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಹೊಂದಿದೆ. ಅಲ್ಲದೇ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆಇದ್ದು, ಇದರೊಂದಿಗೆ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಇದೆ.

ಮೊಟೊ ಎಡ್ಜ್ 50 ಪ್ರೊ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದ್ದು, ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯ ನೀಡಿಲ್ಲ.
ಮೊಟೊ ಎಡ್ಜ್ 50 ಪ್ರೊ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿವೆ. ಇನ್ನು ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಬಿಗ್ ಹೈಲೈಟ್ ಆಗಿದೆ.

ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.
ಇನ್ನು ಈ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಆರಂಭಿಕ ಕೊಡುಗೆಯ ಬೆಲೆಯು 29,999ರೂ. ಗಳು ಆಗಿದೆ. ಗ್ರಾಹಕರು ಈ ಫೋನ್ ಮೂನ್ಲೈಟ್ ಪರ್ಲ್, ಲಕ್ಸ್ ಲ್ಯಾವೆಂಡರ್ ಮತ್ತು ಬ್ಲ್ಯಾಕ್ ಬ್ಯೂಟಿ ಬಣ್ಣಗಳ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದ್ದು, ಫಸ್ಟ್ ಸೇಲ್ ಏಪ್ರಿಲ್ 9 ರಂದು ಪ್ರಾರಂಭವಾಗಲಿದೆ.


Click it and Unblock the Notifications








