Home
ಸುದ್ದಿಜಾಲ

ಇಂದು Motorola Edge 50 ಫೋನ್‌ ಲಾಂಚ್‌; ಬೆಲೆ ಎಷ್ಟು?..ಫೀಚರ್ಸ್‌ ಏನಿವೆ?

ಲೀಡಿಂಗ್‌ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾದ ಮೊಟೊರೊಲಾ ಸಂಸ್ಥೆಯ ಬಹುನಿರೀಕ್ಷಿತ ಹೊಸ ಮೊಟೊರೊಲಾ ಎಡ್ಜ್‌ 50 (Motorola Edge 50) ಫೋನ್‌ ಇಂದು (ಅಗಷ್ಟ್ 1 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್‌ ಆಗಲಿದೆ. ಈ ನೂತನ ಮೊಬೈಲ್‌ ಸ್ಟೈಲಿಶ್‌ ಲುಕ್‌ ಮತ್ತು ಕೆಲವು ಆಕರ್ಷಕ ಫೀಚರ್ಸ್‌ಗಳಿಂದಾಗಿ ಈಗಾಗಲೇ ಫೋನ್‌ ಪ್ರಿಯ ಗ್ರಾಹಕರ ಗಮನ ಸೆಳೆದುಕೊಂಡಿದೆ. ಅಂದಹಾಗೆ ಈ ಮೊಬೈಲ್‌ ಪ್ರೊ ಮಾದರಿಯ ಸೋನಿ - LYTIA 700C ಕ್ಯಾಮೆರಾ ಸೌಲಭ್ಯ ಪಡೆದಿರುವುದು ಖಚಿತ ಎನ್ನಲಾಗಿದೆ.

ಹೌದು, ಮೊಟೊರೊಲಾ ಎಡ್ಜ್‌ 50 (Motorola Edge 50) ಮೊಬೈಲ್‌ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಬಿಡುಗಡೆ ಆಗಲಿದೆ. ಈ ಮೊಬೈಲ್‌ ಲಾಂಚ್‌ ಬಗ್ಗೆ ದೈತ್ಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೈಕ್ರೋ ಪೇಜ್‌ ಸಹ ಪ್ರಾರಂಭ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್‌ 1 ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಇಂದು Motorola Edge 50 ಫೋನ್‌ ಲಾಂಚ್‌; ಬೆಲೆ ಎಷ್ಟು?..ಫೀಚರ್ಸ್‌ ಏನಿವೆ?

ಅಲ್ಲದೇ ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಸಲಾಗಿದೆ ಓದಿರಿ.

ಮೊಟೊರೊಲಾ ಎಡ್ಜ್‌ 50 - ನಿರೀಕ್ಷಿತ ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಒಳಗೊಂಡಿರಲಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿರಲಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಬರಲಿದ್ದು, 3D ಕರ್ವ್‌ ಡಿಸ್‌ಪ್ಲೇ ರಚನೆ ಅನ್ನು ಪಡೆದಿರಲಿದೆ.

ಮೊಟೊರೊಲಾ ಎಡ್ಜ್‌ 50 ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್‌ 1 ಪ್ರೊಸೆಸರ್‌ ಸಪೋರ್ಟ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಇರಲಿದೆ. ಇದರೊಂದಿಗೆ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದಿರಲಿದೆ. ಇನ್ನು ಎಸ್‌ಡಿ ಕಾರ್ಡ್‌ ಸ್ಲಾಟ್‌ ಸೌಲಭ್ಯ ಅಲಭ್ಯ ಎಂದು ನಿರೀಕ್ಷಿಸಲಾಗಿದೆ.

ಮೊಟೊರೊಲಾ ಎಡ್ಜ್‌ 50 ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿರಲಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾ ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 10 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ವಿಶೇಷ ಅಂದ್ರೆ, ಇದು 32 ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ.

ಮೊಟೊರೊಲಾ ಎಡ್ಜ್‌ 50 ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಪಡೆದಿರಲಿದೆ. ಹಾಗೆಯೇ 15W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಇರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ. ಈ ಸ್ಮಾರ್ಟ್‌ಫೋನ್ ಅತಿ ಹೆಚ್ಚು ಅಥವಾ ಕಡಿಮೆ ತಾಪಮಾನ, ಆಘಾತ, ಕಂಪನ, ಒತ್ತಡ, ಆರ್ದ್ರತೆ, ಧೂಳು ಮತ್ತು ಉಪ್ಪು ಮಂಜನ್ನು ತಡೆದುಕೊಳ್ಳಲು ಆಯ್ಕೆ ಪಡೆದಿರಲಿದೆ.

ಮೊಟೊರೊಲಾ ಎಡ್ಜ್‌ 50 ಸ್ಮಾರ್ಟ್‌ಫೋನ್‌ ಇಂದು (ಆಗಷ್ಟ್‌ 1 ರಂದು) ಅಧಿಕೃತವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಫೋನ್‌ ಜಂಗಲ್ ಗ್ರೀನ್ ಮತ್ತು ಪ್ಯಾಂಟೋನ್ ಪೀಚ್ ಫಜ್ ಬಣ್ಣಗಳು ವೆಗನ್‌ ಲೆದರ್ ಬ್ಯಾಕ್‌ನೊಂದಿಗೆ ಬರುತ್ತವೆ ಹಾಗೂ ಕೋಲಾ ಗ್ರೇ ಕಲರ್‌ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಳ್ಳಲಿದೆ.

Best Mobiles in India

English summary
Motorola Edge 50 to launch in India Today. check out Expected Price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+