ಇಂದು ಮೊಟೊರೊಲಾದ ಈ ಹೊಸ ಸ್ಟೈಲಿಶ್ ಫೋನ್ ಲಾಂಚ್; ಫೀಚರ್ಸ್ ಏನು?
ಮೊಟೊರೊಲಾ ಕಂಪನಿಯ ನೂತನ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ ( Motorola Edge 50 Ultra 5G ) ಇಂದು (ಜೂನ್ 18 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಇದು ಡಿಸೈನ್ ಹಾಗೂ ಹೈ ಎಂಡ್ ಮಾದರಿಯ ಕೆಲವು ಆಯ್ಕೆಗಳಿಂದ ಈಗಾಗಲೇ ಮೊಬೈಲ್ ಪ್ರಿಯರ ಕುತೂಹಲ ಹೆಚ್ಚು ಮಾಡಿದೆ. ಇದು 50 ಮೆಗಾ ಪಿಕ್ಸಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ಪಡೆದಿದ್ದು, ಜೊತೆಗೆ 100X AI ಜೂಮ್ ಆಯ್ಕೆಯನ್ನು ಪಡೆದಿರುವುದು ಖಚಿತ ಎನ್ನಲಾಗಿದೆ.
ಹೌದು, ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ ದೇಶಿಯ ಮಾರುಕಟ್ಟೆಯಲ್ಲಿ ಇಂದು ಬಿಡುಗಡೆ ಆಗಲಿದೆ. ಈ ಫೋನ್ ಲಾಂಚ್ ಕುರಿತಾಗಿ ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೈಕ್ರೋ ಪೇಜ್ ಪ್ರಾರಂಭ ಮಾಡಿದೆ. ಮೊಟೊದ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ.

ಇನ್ನು ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ನಿರೀಕ್ಷೆಗಳು ಇದ್ದು, ಹಾಗೆಯೇ ಸೆಲ್ಫಿ ಕ್ಯಾಮೆರಾ ಕೂಡಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇರಲಿದೆ ಎಂದು ಹೇಳಲಾಗಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಸಲಾಗಿದೆ ಓದಿರಿ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ನಿರೀಕ್ಷಿತ ಫೀಚರ್ಸ್
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಒಳಗೊಂಡಿರಲಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿರಲಿದ್ದು, ಇದರೊಂದಿಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿರಲಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿರಲಿದೆ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಸಪೋರ್ಟ್ ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಖಚಿತ ಎನ್ನಲಾಗಿದೆ. ಅಲ್ಲದೇ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಸಹ ಪಡೆದಿರಲಿದೆ. ಇನ್ನು ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯ ಅಲಭ್ಯ ಎಂದು ಹೇಳಲಾಗುತ್ತಿದೆ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿರಲಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಇರಲಿದೆ. ವಿಶೇಷ ಅಂದ್ರೆ, ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರಲಿದೆ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದ್ದು. ಹಾಗೆಯೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಇರುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ. ಈ ಫೋನ್ ವೈಟ್, ಪಿಂಕ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಎಂಟ್ರಿ ಕೊಡುವ ನಿರೀಕ್ಷೆಗಳು ಇವೆ.


Click it and Unblock the Notifications








