ಇಂದು ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಸೇಲ್; ಆಫರ್ ಏನಿದೆ? ಬೆಲೆ ಎಷ್ಟು?
ಮೊಟೊರೊಲಾ ಕಂಪನಿಯು ನೂತನವಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ 'ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G' ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ ಇಂದು (ಜೂನ್ 24 ರಂದು) ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನಿನ ಆರಂಭಿಕ ಕೊಡುಗೆಯ ಬೆಲೆ 54,999ರೂ. ಆಗಿದೆ. ಇನ್ನು ಈ ಫೋನ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಆಗಿದೆ.
ಹೌದು, ಮೊಟೊ ಸಂಸ್ಥೆಯ ಇತ್ತೀಚಿನ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೋನಿನ ಮಾರಾಟ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾರಂಭ ಆಗಲಿದೆ. ಈ ಫೋನ್ 12 GB RAM ಮತ್ತು 512 GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದೆ.

ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ವೈಟ್, ಪಿಂಕ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೀಚರ್ಸ್
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲ ಇದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಸಪೋರ್ಟ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಒಳಗೊಂಡಿದೆ. ಅಲ್ಲದೇ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಸಹ ಹೊಂದಿದ್ದು, ಇನ್ನು ಎಸ್‌ಡಿ ಕಾರ್ಡ್ ಸ್ಲಾಟ್ ಸೌಲಭ್ಯ ಅಲಭ್ಯ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ವಿಶೇಷ ಅಂದ್ರೆ, ಇದು 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಇದೆ.
ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಇದು 50W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಲಭ್ಯ. ಜೊತೆಗೆ ಈ ಫೋನ್ ವೈಟ್, ಪಿಂಕ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








