Home
ಸುದ್ದಿಜಾಲ

ಲಾಂಚ್‌ ಆಗಿಯೇ ಬಿಡ್ತು ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G; ವಾವ್‌ ಎನಿಸುವ ಫೀಚರ್ಸ್‌!

ಮೊಟೊರೊಲಾ ಸಂಸ್ಥೆಯ ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G ಮೊಬೈಲ್ ( Motorola Edge 50 Ultra 5G ) ಇಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಬಿಡುಗಡೆಗೂ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಮೊಬೈಲ್‌ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪ್ರಾಥಮಿಕ ಕ್ಯಾಮೆರಾ ಪಡೆದಿದ್ದು, ಜೊತೆಗೆ 50 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಕೂಡಾ ಪಡೆದುಕೊಂಡಿದೆ. ಇದರೊಂದಿಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8s ಜೆನ್‌ 3 ಪ್ರೊಸೆಸರ್‌ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ.

ಹೌದು, ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G ಮೊಬೈಲ್‌ ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಈ ಮೊಬೈಲ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಜೊತೆಗೆ 125W ಟರ್ಬೋಪವರ್ ಚಾರ್ಜರ್ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಲಾಂಚ್‌ ಆಗಿಯೇ ಬಿಡ್ತು ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G; ವಾವ್‌ ಎನಿಸುವ ಫೀಚರ್ಸ

ಇನ್ನು ಈ ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಹಾಗೆಯೇ 100X AI ಜೂಮ್‌ ಆಯ್ಕೆಯನ್ನು ಒಳಗೊಂಡಿದೆ. ಇನ್ನು ಈ ಫೋನ್‌ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ. ಹಾಗಾದರೇ ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಸಲಾಗಿದೆ ಓದಿರಿ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ 5G ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಇದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಡಿಸ್‌ಪ್ಲೇ 2500 ನಿಟ್ಸ್‌ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಅಲ್ಲದೇ 3D ಕರ್ವ್‌ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8s ಜೆನ್‌ 3 ಪ್ರೊಸೆಸರ್‌ ಸಪೋರ್ಟ್‌ ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಇದೆ. ಅಲ್ಲದೇ ಈ ಫೋನ್‌ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಇನ್ನು ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಮುಂಭಾಗದಲ್ಲಿ ಇದು 50  ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಒಳಗೊಂಡಿದೆ ಹಾಗೆಯೇ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇವೆ.

ಮೊಟೊರೊಲಾ ಎಡ್ಜ್‌ 50 ಅಲ್ಟ್ರಾ ಫೋನ್‌ 12GB RAM + 512GB ವೇರಿಯಂಟ್‌ ಬೆಲೆಯು 54,999ರೂ. ಗಳು ಆಗಿದೆ. ಇನ್ನು ಈ ಫೋನ್‌ ಪೀಚ್ ಫಜ್, ನಾರ್ಡಿಕ್ ವುಡ್ ಮತ್ತು ಫಾರೆಸ್ಟ್ ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯ. ಇದೇ ಜೂನ್ 24 ರಿಂದ ಫ್ಲಿಪ್‌ಕಾರ್ಟ್‌ ಮೂಲಕ ಸೇಲ್‌ ಪ್ರಾರಂಭ ಆಗಲಿದೆ.

Best Mobiles in India

English summary
Motorola Edge 50 Ultra Launched in India With Snapdragon 8s Gen 3 SoC and Wood Finish Design. Check price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+