ಅಂತೂ ಲಾಂಚ್ ಆಯ್ತು Motorola Edge 50 ಫೋನ್!..ವಾವ್ ಎನಿಸುವ ಫೀಚರ್ಸ್!
ಮೊಟೊರೊಲಾ ಸಂಸ್ಥೆಯ ಬಹುನಿರೀಕ್ಷಿತ ನೂತನ ಮೊಟೊರೊಲಾ ಎಡ್ಜ್ 50 (Motorola Edge 50) ಸ್ಮಾರ್ಟ್‌ಫೋನ್ ಇಂದು ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಸ್ಮಾರ್ಟ್‌ಫೋನ್ ಸ್ಲಿಮ್ ರಚನೆ, ರಗಡ್ ಲುಕ್ ಜೊತೆಗೆ ಕೆಲವು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ ಈ ಮೊಬೈಲ್ ದೀರ್ಘ ಬಾಳಿಕೆಗಾಗಿ ಮಿಲಿಟರಿ ದರ್ಜೆಯ ಪ್ರಮಾಣೀಕರಣ 'MIL-STD 810H' ಪಡೆದುಕೊಂಡಿದ್ದು, ಆಕರ್ಷಕ ಎನಿಸಿದೆ.
ಹೌದು, ಮೊಟೊರೊಲಾ ಎಡ್ಜ್ 50 (Motorola Edge 50) ಸ್ಮಾರ್ಟ್‌ಫೋನ್ ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಲಾಂಚ್ ಆಗಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 7 ಜೆನ್ 1 ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದರೊಂದಿಗೆ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ.

ಅಂದಹಾಗೆ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 27,999ರೂ. ಗಳು ಆಗಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಸಲಾಗಿದೆ ಓದಿರಿ.
ಮೊಟೊರೊಲಾ ಎಡ್ಜ್ 50 - ಫೀಚರ್ಸ್
ಮೊಟೊರೊಲಾ ಎಡ್ಜ್ 50 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಒಳಗೊಂಡಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಮಾಡಲಿದೆ. ಜೊತೆಗೆ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದೆ. ಇದು 1,900 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 50 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಇದರೊಂದಿಗೆ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಸಹ ಪಡೆದಿದೆ.
ಮೊಟೊರೊಲಾ ಎಡ್ಜ್ 50 ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾ ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 10 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊರೊಲಾ ಎಡ್ಜ್ 50 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇರಲಿವೆ. ಈ ಸ್ಮಾರ್ಟ್‌ಫೋನ್ ಅತಿ ಹೆಚ್ಚು ಅಥವಾ ಕಡಿಮೆ ತಾಪಮಾನ, ಆಘಾತ, ಕಂಪನ, ಒತ್ತಡ, ಆರ್ದ್ರತೆ, ಧೂಳು ಮತ್ತು ಉಪ್ಪು ಮಂಜನ್ನು ತಡೆದುಕೊಳ್ಳಲು ಆಯ್ಕೆ ಪಡೆದಿದೆ.
ಬೆಲೆ ಹಾಗೂ ಲಭ್ಯತೆ
ಮೊಟೊರೊಲಾ ಎಡ್ಜ್ 50 ಸ್ಮಾರ್ಟ್‌ಫೋನ್ 8GB RAM + 256GB ವೇರಿಯಂಟ್ ಬೆಲೆಯು 27,999ರೂ. ಆಗಿದೆ. ಇನ್ನು ಇದು ಜಂಗಲ್ ಗ್ರೀನ್ ಮತ್ತು ಪ್ಯಾಂಟೋನ್ ಪೀಚ್ ಫಜ್ ಬಣ್ಣಗಳು ವೆಗನ್ ಲೆದರ್ ಬ್ಯಾಕ್‌ನೊಂದಿಗೆ ಬರುತ್ತವೆ ಹಾಗೂ ಕೋಲಾ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಅಂದಹಾಗೆ ಇದೇ ಆಗಷ್ಟ್ 8 ರಂದು ಫ್ಲಿಪ್‌ಕಾರ್ಟ್ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ.


Click it and Unblock the Notifications








