Home
ಸುದ್ದಿಜಾಲ

ಇಂದು Motorola Edge 60 Fusion ಫಸ್ಟ್ ಸೇಲ್; 2000 ರಿಯಾಯಿತಿ.. ಬೆಲೆಯೂ ಕಡಿಮೆ.. ಸೂಪರ್ ಫೀಚರ್ಸ್

ಮೊಟೊರೊಲಾ ಪ್ರಿಯರಿಗೆ ಸಿಹಿಸುದ್ದಿ ಇದೆ. ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿದ್ದ ಸೊಗಸಾದ ಮೊಬೈಲ್ ಇಂದು ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ಮೊಟೊರೊಲಾ ಎಡ್ಜ್ 60 ಫ್ಯೂಷನ್ (Motorola Edge 60 Fusion) ಇಂದು (ಏಪ್ರಿಲ್ 9 ರಂದು) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಕಂಪನಿಯು ಲಾಂಚ್ ಆಫರ್ ಅಂಗವಾಗಿ, ಈ ಫೋನಿನ ಖರೀದಿ ಮೇಲೆ 2000 ರಿಯಾಯಿತಿ ನೀಡುತ್ತದೆ. ಈ ಮೊಟೊರೊಲಾ ಫೋನಿಗೆ ಯಾವೆಲ್ಲ ಆಫರ್ ಲಭ್ಯವಿದೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಕಂಪನಿಯು ತನ್ನ Edge ಸರಣಿಯ ಅಡಿಯಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದ. ಈ 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಇದರ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಈ ಮೊಬೈಲ್ 5,500mAh ಬ್ಯಾಟರಿ ಮತ್ತು 68W ವೇಗದ ಚಾರ್ಜಿಂಗ್ ಒಳಗೊಂಡಿದೆ. ಜೊತೆಗೆ 6.7 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್ ಸೇರಿದಂತೆ ಮುಂತಾದ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಇಂದು Motorola Edge 60 Fusion ಸೇಲ್; 2000 ರಿಯಾಯಿತಿ, ಕಡಿಮೆ ಬೆಲೆ..ಹೇಗಿದೆ?

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ ಮತ್ತು ಆಫರ್

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನಿನ ಮೂಲ ಮಾದರಿ 8GB RAM + 256GB ಸ್ಟೋರೇಜ್ ಬೆಲೆ 22,999 ರೂ. ಆಗಿದೆ. ಇನ್ನು 12GB RAM + 256GB ಸ್ಟೋರೇಜ್ ಅನ್ನು 24,999 ರೂ.ಗೆ ಮಾರಾಟ ಮಾಡಲಾಗುವುದು. ಈ ಫೋನ್ ಪ್ಯಾಂಟೋನ್ ಅಮೆಜಾನೈಟ್, ಪ್ಯಾಂಟೋನ್ ಸ್ಲಿಪ್‌ಸ್ಟ್ರೀಮ್ ಮತ್ತು ಪ್ಯಾಂಟೋನ್ ಜೆಫಿರ್ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್ ಖರೀದಿ ಮೇಲೆ 2,000 ರೂ. ರಿಯಾಯಿತಿ ಲಭ್ಯವಿದೆ. ನೀವು 20,999 ರೂ.ಗೆ ಮೂಲ ರೂಪಾಂತರವನ್ನು ಖರೀದಿಸಬಹುದು. ಇದು ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಲಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋಟೋಗ್ರಫಿ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್ ಲೈಟ್ ಜೊತೆಗೆ ಬರುತ್ತದೆ. ಇದರೊಂದಿಗೆ 13 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಮತ್ತು ಮ್ಯಾಕ್ರೋ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ ಮೀಡಿಯಾ ಟೆಕ್‌ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಫೋನ್ ಇದಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಮೊಬೈಲ್ ಮಾಲಿ G615 MC2 ಜಿಪಿಯು ಸಹ ಹೊಂದಿದೆ. ಈ ಫೋನ್ 8GB RAM ಮತ್ತು 12GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಇಂದು Motorola Edge 60 Fusion ಸೇಲ್; 2000 ರಿಯಾಯಿತಿ, ಕಡಿಮೆ ಬೆಲೆ..ಹೇಗಿದೆ?

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ. ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,712 x 1,220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 360Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಬ್ಲೂಟೂತ್ 5.4, ವೈ-ಫೈ 6, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Motorola Edge 60 Fusion First Sale Start Today via Flipkart: check price, offer, Features, and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+