Home
ಸುದ್ದಿಜಾಲ

Motorola: ಏ.9ಕ್ಕೆ ಹೊಸ ಫೋನ್ ಸೇಲ್; 5500mAh ಬ್ಯಾಟರಿ.. 50MP + 32MP ಕ್ಯಾಮೆರಾ.. ಕೈಗೆಟುಕುವ ಬೆಲೆ

ಮೊಟೊರೊಲಾ ಕಂಪನಿಯು ಕಳೆದ ವಾರ ಹೊಸ 5G ಮೊಬೈಲ್ ಬಿಡುಗಡೆ ಮಾಡಿದೆ. ಕಂಪನಿಯು ತನ್ನ Edge ಸರಣಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ವಿಸ್ತರಿಸಿದೆ. ಹೌದು, ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G (Motorola Edge 60 Fusion 5G) ಅಧಿಕೃತವಾಗಿ ಭಾರತಕ್ಕೆ ಬಂದಿದೆ. ಅಂದಹಾಗೆ, ಈ ಫೋನ್ ಇದೇ ಏಪ್ರಿಲ್ 9 ರಂದು ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಕಂಪನಿಯು ಆರಂಭಿಕ ಮಾರಾಟದ ಪ್ರಯುಕ್ತ ಆಫರ್ ಘೋಷಿಸಿದೆ. ಈ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ, ಆಫರ್ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಈ ಮೊಬೈಲ್‌ನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5,500mAh ಬ್ಯಾಟರಿ ಮತ್ತು 68W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಈ ಫೋನ್ 6.7 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Motorola: ಏ.9ಕ್ಕ ಫಸ್ಟ್ ಸೇಲ್.. ಲಕ್ಷುರಿ ಫೀಚರ್ಸ್‌.. ಬೆಲೆ, ಆಫರ್ ಏನಿದೆ?

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬೆಲೆ ಮತ್ತು ಆಫರ್

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ 8GB RAM + 256GB ಸ್ಟೋರೇಜ್ ಮತ್ತು 12GB RAM + 256GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ಇವುಗಳ ಬೆಲೆ ಕ್ರಮವಾಗಿ 22,999 ರೂ. ಮತ್ತು 24,999 ರೂ. ಆಗಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಈ ಫೋನ್ ಖರೀದಿ ಮೇಲೆ 2,000 ರೂ. ಡಿಸ್ಕೌಂಟ್ ನೀಡಲಿದೆ. ನೀವು 20,999 ರೂ.ಗೆ ಈ ಸ್ಮಾರ್ಟ್‌ಫೋನ್ ಕೊಳ್ಳಬಹುದು. ಇದು ಪ್ಯಾಂಟೋನ್ ಅಮೆಜಾನೈಟ್, ಪ್ಯಾಂಟೋನ್ ಸ್ಲಿಪ್‌ಸ್ಟ್ರೀಮ್ ಮತ್ತು ಪ್ಯಾಂಟೋನ್ ಜೆಫಿರ್ ಬಣ್ಣಗಳಲ್ಲಿ ಬರುತ್ತದೆ. ಇದೇ ಏಪ್ರಿಲ್ 9 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್, ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ರಿಲಯನ್ಸ್ ಡಿಜಿಟಲ್ ಸೇರಿದಂತೆ ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಲಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 x 1220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಬೆಂಬಲ ಹೊಂದಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ. ಈ ಮೊಟೊರೊಲಾ ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಮೊಬೂಲ್ ಇದಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು ಮಾಲಿ G615 MC2 ಜಿಪಿಯು ಸಹ ಹೊಂದಿದೆ.

Motorola: ಏ.9ಕ್ಕ ಫಸ್ಟ್ ಸೇಲ್.. ಲಕ್ಷುರಿ ಫೀಚರ್ಸ್‌.. ಬೆಲೆ, ಆಫರ್ ಏನಿದೆ?

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಈ ಮೊಬೈಲ್‌ನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್ ಲೈಟ್ ಹೊಂದಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು ಮ್ಯಾಕ್ರೋ ಲೆನ್ಸ್ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಫೋನ್ 8GB RAM ಮತ್ತು 12GB RAM ಹೊಂದಿದೆ. ಇದರೊಂದಿಗೆ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಸ್ಮಾರ್ಟ್‌ಫೋನ್ 5,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ.ಈ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ. ಇದು ವಾಟರ್ ಟಚ್ 3.0, ಮೋಟೋ ಗೆಸ್ಚರ್‌ಗಳು ಮತ್ತು ಎಐ (AI) ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.4, ವೈ-ಫೈ 6, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Motorola Edge 60 Fusion Will Go on Sale in India from April 16 via Flipkart: Check Price, offers and Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+