ನಾಳೆ Motorola Edge 60 Stylus ಲಾಂಚ್; ಫೀಚರ್ಸ್ ಬಹಿರಂಗ.. ಬೆಲೆ 24000ಕ್ಕಿಂತ ಕಡಿಮೆ!
ಮೊಟೊರೊಲಾ ಭಾರತದಲ್ಲಿ ತನ್ನ ಹೊಸ ಮೊಬೈಲ್ ಬಿಡುಗಡೆಗೆ ಸಿದ್ಧವಾಗಿದೆ. ಕಂಪನಿಯು ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋನಿನ ಬಳಿಕ, ಅದೇ ಸರಣಿಯಲ್ಲಿ ಈ ಹೊಸ ಸ್ಮಾರ್ಟ್‌ಫೋನ್ ತರುತ್ತಿದೆ. ಹೌದು, ಮೊಟೊರೊಲಾ ಎಡ್ಜ್ 60 ಸ್ಟೈಲಸ್ (Motorola Edge 60 Stylus) ಮೊಬೈಲ್ ನಾಳೆ (ಏಪ್ರಿಲ್ 15) ದೇಶೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈಗಾಗಲೇ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮುಂಬರುವ ಮೊಟೊರೊಲಾ ಫೋನಿನ ಮೈಕ್ರೋ ಸೈಟ್ ಲೈವ್ ಆಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ನೋಡೋಣ.
ಹೌದು, ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಸ್ಮಾರ್ಟ್‌ಫೋನ್ ಬೆಲೆ 24,000 ರೂ.ಗಿಂತ ಕಡಿಮೆ ಇರಲಿದೆ. ಈ ಫೋನಿನ ವಿಶೇಷತೆಗಳೆಂದರೆ, ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 2 ಪ್ರೊಸೆಸರ್ ಹೊಂದಿರಲಿದೆ. ಜೊತೆಗೆ 8GB RAM ಮತ್ತು 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 68W ಟರ್ಬೊಪವರ್ಮೊ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ.

ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಬಿಡುಗಡೆ
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಮೊಬೈಲ್ ಸ್ಮಾರ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಎರಡು (PANTONE Surf the Web ಮತ್ತು PANTONE Gibraltar Sea) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಎಸ್ ಪೆನ್ ಹೊಂದಿರುವ ಈ 5G ಫೋನ್ ಏಪ್ರಿಲ್ 15 ರಂದು (ನಾಳೆ) ಅಧಿಕೃತವಾಗಿ ರಿಲೀಸ್ ಆಗಲಿದೆ. ಕಂಪನಿಯ ವೆಬ್‌ಸೈಟ್ ಮೂಲಕ ಈ ಫೋನನ್ನು ಲಾಂಚ್ ಮಾಡಲಾಗುತ್ತದೆ. ಇದೇ ವೇಳೆ ಈ ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸಲಾಗುವುದು.
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 60 ಸ್ಟೈಲ್ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ 2.5D ಕರ್ವ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2712 x 1220 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಈ ಸ್ಕ್ರೀನ್ 120Hz ರಿಫ್ರೆಶ್ ದರ, 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಸ್ಮಾರ್ಟ್‌ಫೋನ್ ಗೊರಿಲ್ಲಾ ಗ್ಲಾಸ್ 3 ತಂತ್ರಜ್ಞಾನ ಹೊಂದಿದೆ. ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S ಜೆನ್ 2 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 710 ಜಿಪಿಯು ಸಹ ಹೊಂದಿದೆ.
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್ ಲೈಟ್ ಹೊಂದಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 3 ಇನ್ 1 ಲೈಟ್ ಸೆನ್ಸರ್ ಅನ್ನು ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನ್ 68W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗುವುದು.
ಮೊಟೊರೊಲಾ ಎಡ್ಜ್ 60 ಸ್ಟೈಲಸ್ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ, IP68 ರೇಟಿಂಗ್ ಪಡೆದಿದೆ. ಇದು MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕೃತವಾಗಿದೆ. ಈ ಫೋನಿನಲ್ಲಿ ಮೋಟೋ ಎಐ (AI) ಸಹ ಇರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಬ್ಲೂಟೂತ್ 5.4, ವೈ-ಫೈ 6 ಜೊತೆಗೆ ಎನ್‌ಎಫ್‌ಸಿ ಬೆಂಬಲ ಹೊಂದಿದೆ. ಹಾಗೆಯೇ ಸ್ಟೀರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮಾಸ್ ಸಹ ಇರುತ್ತದೆ.


Click it and Unblock the Notifications








