ಮೊಟೊರೊಲಾ ಎಡ್ಜ್ ಪ್ಲಸ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಮೊಟೊರೊಲಾ ತನ್ನ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದ ಮೊಟೊ ಇದೀಗ ಮತ್ತೊಮ್ಮೆ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ. ಇನ್ನು ನಿಮಗೆಲ್ಲಾ ಗೊತ್ತಿರುವಂತೆ ಈಗಾಗಲೇ ಹಲವು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಬ್ಯವಿವೆ. ಆದರೂ ಸ್ಮಾರ್ಟ್‌ಫೋನ್‌ ಪ್ರಿಯರು ಮಾತ್ರ ತಮ್ಮ ನೆಚ್ಚಿನ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ ಇವುಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಹೊಸ ಮೊಟೊರೊಲಾ ಎಡ್ಜ್ + ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ವಿನ್ಯಾಸವನ್ನು ಹೊಂದಿರುವ ಸಾಧ್ಯತೆ ಇದ್ದು ಬಾರಿ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಇದರ ನಡುವೆ ಇನ್ನು ಅಧಿಕೃತವಾಗಿ ಬಿಡುಗಡೆ ಆಗುವ ಮುನ್ನವೇ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ. ಇದರ ಬೆಲೆಯೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ಮಾದರಿ

ಡಿಸ್‌ಪ್ಲೇ ಮಾದರಿ

ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಮೊಟೊರೊಲಾ ಎಡ್ಜ್ + ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.7 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು 90hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಬಾಗಿದ ಅಂಚಿನ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 386PPI ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದ್ದು, ಇದು ಅಮೊಲೇಡ್‌ ಡಿಸ್‌ಪ್ಲೇ ಆಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದೆ. ಅಲ್ಲದೆ ಇದು ಆಂಡ್ರಾಯ್ಡ್‌ 10 ಸಹಯೋಗದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12 GB RAM ಮತ್ತು 256GB ಆಂತರಿಕ ಸಾಮರ್ಥ್ಯವನ್ನ ಒಳಗೊಂಡಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿಲ್ಲ ಎಂದು ಹೇಳಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ಎಡ್ಜ್‌ ಪ್ಲಸ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ f/ 1.8 ಲೆನ್ಸ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಜೊತೆಗೆ 117 ಡಿಗ್ರಿ ಫೀಲ್ಡ್-ವ್ಯೂ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಹೊಂದಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎನ್ನಲಾಗಿದ್ದು, ಈ ಕ್ಯಾಮೆರಾ ಮೂಲಕ 6k ವೀಡಿಯೊವನ್ನು ರೆಕಾರ್ಡ್ ಮಾಡಬಹುದು ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು,15W ವಾಯರ್‌ಲೆಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ ಫೀಚರ್ ಸ್ಟೀರಿಯೋ ಸ್ಪೀಕರ್‌ಗಳು, ಬ್ಲೂಟೂತ್ ವಿ 5.1, ಮತ್ತು 3.5 ಎಂಎಂ ಆಡಿಯೊ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಮೊಟೊರೊಲಾ ಎಡ್ಜ್ + ಪ್ರಾರಂಭಿಕ ಬೆಲೆ $ 1,000 (ಸುಮಾರು 75,900 ರೂ.) ಹೊಂದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Motorola Edge+ is tipped to be priced at $1,000. The phone’s key specifications will reportedly include a 108-megapixel main camera.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X