5G ಬೆಂಬಲಿಸುವ ಮೊಟೊರೊಲಾ ಎಡ್ಜ್‌ ಸ್ಮಾರ್ಟ್‌ಫೋನ್‌ ಲಾಂಚ್‌!

|

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಬ್ಯವಿವೆ. ಈಗಾಗಲೇ ಹಲವು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್‌ ಪ್ರಿಯರನ್ನ ಸೆಳೆದಿವೆ. ಇವುಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಸದ್ಯ ತನ್ನ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾದ ಮೊಟೊರೊಲಾ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಜನಪ್ರಿಯ

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ತನ್ನ ಹೊಸ ಮೊಟೊರೊಲಾ ಎಡ್ಜ್ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಸದ್ಯ ಈ ಸರಣಿಯಲ್ಲಿ ಮೊಟೊರೊಲಾ ಎಡ್ಜ್ + ಮತ್ತು ಮೊಟೊರೊಲಾ ಎಡ್ಜ್ ಮಿಡ್-ರೇಂಜರ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ಗಳು ಪಂಚ್‌ಹೋಲ್‌ ಕ್ಯಾಮೆರಾ ವಿನ್ಯಾಸವನ್ನು ಹೊಂದಿವೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಹಾಗಾದ್ರೆ ಮಿಡ್‌ ರೇಂಜರ್‌ ಸ್ಮಾರ್ಟ್‌ಫೋನ್‌ ಆಗಿರುವ ಮೊಟೊರೊಲಾ ಎಡ್ಜ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಮೊಟೊರೊಲಾ ಎಡ್ಜ್‌ ಸ್ಮಾರ್ಟ್‌ಫೋನ್‌ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಪ್ಲಸ್‌ ಒಎಲ್ಇಡಿ ಡಿಸ್‌ಪ್ಲೇ ಆಗಿದ್ದು ಬಾಗಿದ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು ಐಪಿ 54 ಪ್ರಮಾಣೀಕೃತ ನಿರ್ಮಾಣವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ HDR10+ ಅನ್ನು ಬೆಂಬಲಿಸಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಇದು ಆಂಡ್ರಾಯ್ಡ್‌ 10 ಅನ್ನು ಬೆಂಬಲಿಲಿಸದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಮೊಟೊರೊಲಾ ಎಡ್ಜ್‌ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಬೆಂಬಲವನ್ನು ಹೊಂದಿದ್ದು, ಇದು ಟೈಮ್ ಆಫ್ ಫ್ಲೈಟ್ ( ToF) ಸೆನ್ಸಾರ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಜೊತೆಗೆ ಇದು 18W ಟರ್ಬೊಪವರ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ 5.0, ವೈ-ಫೈ, ಜಿಪಿಎಸ್, ಎಜಿಪಿಎಸ್, ಎಲ್‌ಟಿಇಪಿಪಿ,ಅನ್ನು ಬೆಂಬಲಿಸಲಿದೆ. ಅಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ, ಆಂಬಿಯೆಂಟ್‌ ಲೈಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಮೊಟೊರೊಲಾ ಎಡ್ಜ್ ಸ್ಮಾರ್ಟ್‌ಫೋನ್‌ ಯುರೋಪ್‌ನಲ್ಲಿ ಯುರೋ 699 (ಸುಮಾರು 58,000 ರೂ.) ಬೆಲೆ ಯನ್ನು ಹೊಂದಿದ್ದರೆ, ಯುನೈಟೆಡ್ ಸ್ಟೇಟ್ಸ್‌ನಲ್ಲಿ 99 999 (ಸುಮಾರು 76,400ರೂ) ಬೆಲೆಯನ್ನ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಮೋಕಿ ಸಾಂಗ್ರಿಯಾ ಮತ್ತು ಥಂಡರ್ ಗ್ರೇ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Motorola Edge, this one is a dual-SIM (Nano) phone and runs Android 10 out-of-the-box. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X