Home
ಸುದ್ದಿಜಾಲ

ಮೊಟೊರೊಲಾ ಎಡ್ಜ್ ಲೈಟ್ ಫೋನಿನ ಫೀಚರ್ಸ್‌ ಲೀಕ್!

ಜನಪ್ರಿಯ ಮೊಟೊರೊಲಾ ಕಂಪನಿಯು ಬಜೆಟ್ ಬೆಲೆಯಿಂದ ದುಬಾರಿ ಬೆಲೆಯವರೆಗಿನ ಹಲವು ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಅವುಗಳಲ್ಲಿ ಮೊಟೊ ಎಡ್ಜ್ ಸರಣಿಯ ಫೋನ್‌ಗಳು ಹೈ ಎಂಡ್ ಮಾದರಿಯಲ್ಲಿ ಭಾರಿ ಸದ್ದು ಮಾಡಿವೆ. ಅದೇ ಹಾದಿಯಲ್ಲಿ ಇದೀಗ ಮೊಟೊರೊಲಾ ಎಡ್ಜ್ ಲೈಟ್ ಫೋನ್ ಲಾಂಚ್ ಮಾಡಿತ್ತಿದ್ದು, ಇದೀಗ ಈ ಫೋನಿನ ಫೀಚರ್ಸ್‌ಗಳು ಲೀಕ್ ಆಗಿವೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿಯು ಈಗ ಹೊಸದಾಗಿ ಮೊಟೊರೊಲಾ ಎಡ್ಜ್ ಲೈಟ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ರಾಹಕರ ನಿರೀಕ್ಷೆ ಹೆಚ್ಚಿಸಿರುವ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಲೀಕ್ ಆಗಿದ್ದು, ಕುತೂಹಲ ಹೆಚ್ಚಿಸಿವೆ. ಮುಖ್ಯವಾಗಿ ಈ ಫೋನ್ 5G ಬೆಂಬಲಿಸಲಿದ್ದು, ಜೊತೆಗೆ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗಾದರೆ ಲೀಕ್ ಮಾಹಿತಿಯಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ.

ಡಿಸ್‌ಪ್ಲೇ

ಡಿಸ್‌ಪ್ಲೇ

ಮೊಟೊರೊಲಾ ಎಡ್ಜ್ ಲೈಟ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇಯು 1080x2520 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಹಾಗೂ ಡಿಸ್‌ಪ್ಲೇ ಅನುಪಾತವು 21:9 ಆಗಿರಲಿದ್ದು, ಡಿಸ್‌ಪ್ಲೇ ರೀಫ್ರೇಶ್ ರೇಟ್ 90Hz ಆಗಿರಲಿದೆ.

ಪ್ರೊಸೆಸರ್

ಪ್ರೊಸೆಸರ್

ಮೊಟೊರೊಲಾ ಎಡ್ಜ್ ಲೈಟ್ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 730G ಅಥವಾ ಸ್ನಾಪ್ಡ್ರಾಗನ್ 765G ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಇತ್ತೀಚಿನ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿರಲಿದೆ. ಜೊತೆಗೆ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಇರಲಿದೆ.

ಕ್ಯಾಮೆರಾ

ಕ್ಯಾಮೆರಾ

ಮೊಟೊರೊಲಾ ಎಡ್ಜ್ ಲೈಟ್ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಹೊಂದಿರಲಿದೆ. ಉಳಿದಂತೆ 16ಎಂಪಿ ಸೆನ್ಸಾರ್, 8ಎಂಪಿ ಸೆನ್ಸಾರ್ ಹಾಗೂ 5ಎಂಪಿ ಸೆನ್ಸಾರ್ ಕ್ಯಾಮೆರಾಗಳ ಸೆಟ್‌ಅಪ್ ಇರಲಿದೆ.

ಬ್ಯಾಟರಿ

ಬ್ಯಾಟರಿ

ಮೊಟೊರೊಲಾ ಎಡ್ಜ್ ಲೈಟ್ ಫೋನ್ 4,800 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಸಾಧ್ಯತೆಗಳಿವೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ನೀಡುವುದು ಸಹ ಬಹುತೇಕ ಖಚಿತ ಎನ್ನಲಾಗಿದೆ. ಉಳಿದಂತೆ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಜಿಪಿಎಸ್‌, ಸೆನ್ಸಾರ್ ಸೌಲಭ್ಯಗಳು ಸಹ ಇರಲಿವೆ.

Best Mobiles in India

English summary
Upcoming Motorola Edge Lite's existence through an FCC certification, and now the handset's full specs have been leaked.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+