Home
ಸುದ್ದಿಜಾಲ

ಶೀಘ್ರದಲ್ಲೇ ಮೊಟೊರೊಲಾ ಎಡ್ಜ್ ಲೈಟ್ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

ಟೆಕ್‌ ವಲಯದಲ್ಲಿ ಸಾಕಷ್ಟು ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರುಕಟ್ಟೆಯಲ್ಲಿ ಸಾಕಷ್ಟು ಪೈಪೋಟಿಯಿದ್ದು ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನ ತಮ್ಮತ್ತ ಸೆಳೆಯುವ ಕೆಲಸವನ್ನ ಮಾಡುತ್ತಿವೆ. ಇದರ ನಡುವೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನಿಡುತ್ತಲೇ ಇವೆ. ಸದ್ಯ ಇದೀಗ ಮೊಟೊರೊಲಾ ಕಂಪೆನಿ ಕೂಡ ತನ್ನ ಮತ್ತೊಂದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿಯು ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಮೊಟೊರೊಲಾ ಎಡ್ಜ್ ಲೈಟ್ ಅನ್ನು ಬಿಡುಗಡೆ ಮಾಡಲು ಪ್ಲ್ಯಾನ್‌ ರೂಪಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಳೆದ ತಿಂಗಳು ಭಾರತದಲ್ಲಿ ಬಿಡುಗಡೆಯಾದ ಮೊಟೊರೊಲಾ ಎಡ್ಜ್ನ ಟೋನ್-ಡೌನ್ ಆವೃತ್ತಿಯಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ವಿನ್ಯಾಸವನ್ನ ಹೊಂದಿರಲಿದ್ದು, ಪ್ರಿಮಿಯಂ ಸ್ಮಾರ್ಟ್‌ಫೋನ್‌ ಆಗಿರಲಿದೆ ಎಂದು ಹೇಳಲಾಗಿದೆ.

ಸ್ಮಾರ್ಟ್‌ಫೋನ್

ಇನ್ನು ಈ ಸ್ಮಾರ್ಟ್‌ಫೋನ್ ಮಾದರಿ ಸಂಖ್ಯೆ XT2075 ಆಗಿದ್ದು, ಶೀಘ್ರದಲ್ಲೇ ಅದನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗ್ತಿದೆ. ಸದ್ಯ ಮೊಟೊರೊಲಾ ಎಡ್ಜ್ ಸರಣಿಯ ಟೋನ್-ಡೌನ್ ಆವೃತ್ತಿಯಲ್ಲಿ ಬಿಡುಗಡೆ ಮಾಡಲಿದೆ ಎನ್ನಲಿದೆ. ಮೊಟೊರೊಲಾ ಎಡ್ಜ್ ಲೈಟ್ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 730G ಅಥವಾ ಸ್ನಾಪ್ಡ್ರಾಗನ್ 765G ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎಂದು ಹೇಳಲಾಗುತ್ತಿದೆ, ಇನ್ನು ಈ ಸ್ಮಾರ್ಟ್‌ಫೋನ್ 5G ಬೆಂಬಲವನ್ನು ಹೊಂದಿರಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಇಲ್ಲವೇ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಮದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಇದರ ಡಿಸ್‌ಪ್ಲೇ ವಿನ್ಯಾಸ ಉತ್ತಮವಾಗಿದ್ದು, ವೀಡಿಯೋ ಕರೆಗಳು ಹಾಗೂ ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿರಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಮೊಟೊರೊಲಾ

ಇನ್ನು ಮೊಟೊರೊಲಾ ಎಡ್ಜ್ + ಸ್ಮಾರ್ಟ್‌ಫೋನ್‌ ಭಾರತದಲ್ಲಿ 12GB RAM + 256GB ಆಂತರಿಕ ಸಂಗ್ರಹ ರೂಪಾಂತರಕ್ಕೆ 74,999 ರೂ. ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಮೋಕಿ ಸಾಂಗ್ರಿಯಾ ಮತ್ತು ಥಂಡರ್ ಗ್ರೇ ಕಲರ್‌ ಆಯ್ಕೆಗಳಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ HDR10 + ಬೆಂಬಲ ಮತ್ತು 90Hz ರಿಫ್ರೆಶ್ ರೇಟ್‌ ಹೊಂದಿರುವ ಬಾಗಿದ ಡಿಸ್‌ಪ್ಲೇಯನ್ನು ಹೊಂದಿದೆ. ಸದ್ಯ ಬಿಡುಗಡೆ ಆಗಲಿರುವ ಸ್ಮಾರ್ಟ್‌ಫೋನ್‌ ಅತಿ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನಿಡಲಿದೆ ಎನ್ನಲಾಗ್ತಿದೆ.

Best Mobiles in India

English summary
Motorola Edge Lite is reportedly in the works and is said to be a toned-down version of the Motorola Edge that was launched in India last month.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+