Home
ಸುದ್ದಿಜಾಲ

ಮೊಟೊರೊಲಾ ಎಡ್ಜ್ ಪ್ಲಸ್‌ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ!

ಸ್ಮಾರ್ಟ್‌ಫೋನ್‌ ವಲಯದಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿ ಆಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಬಹು ನಿರೀಕ್ಷಿತ ಮೊಟೊರೊಲಾ ಎಡ್ಜ್ + ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಬಾಗಿದ ವಿನ್ಯಾಸವನ್ನು ಹೊಂದಿದೆ. ಇದಲ್ಲದೆ ಉತ್ತಮ ಮಲ್ಟಿಮೀಡಿಯಾ ಅನುಭವವನ್ನು ನೀಡಲು ಮೊಟೊರೊಲಾ ವೇವ್ಸ್ ಟ್ಯೂನ್ ಮಾಡಿದ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಸಹ ನಿಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ

ಮೊಟೊರೊಲಾ ಎಡ್ಜ್ + ಸ್ಮಾರ್ಟ್‌ಫೋನ್‌ 90 Hz ರಿಫ್ರೆಶ್ ರೇಟ್‌ ಅನ್ನು ಹೊಂದಿರುವ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ HDR10 + ಬೆಂಬಲ ಹೊಂದಿರುವ 6.7-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ಫುಲ್‌ ಎಚ್ಡಿ + ಎಂಡ್ಲೆಸ್ ಎಡ್ಜ್ ಡಿಸ್‌ಪ್ಲೇಯನ್ನು ನೀಡಲಾಗಿದೆ. ಅಲ್ಲದೆ ವೀಡಿಯೋ ಕರೆಗಳು ಹಾಗೂ ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ, ಅಲ್ಲದೆ ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಅಡ್ರಿನೊ 650 GPU ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶವನ್ನ ನೀಡಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ಎಡ್ಜ್‌+ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ f/ 1.8 ಲೆನ್ಸ್ ಮತ್ತು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಒಳಗೊಂಡಿದೆ. ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದ್ದು, ಇದು 117 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ ಟೈಂ ಆಪ್‌ ಲೈಟ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000WAA ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ಟರ್ಬೊಪವರ್ ವೈರ್ಡ್ ಚಾರ್ಜಿಂಗ್, 18W ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ವಾಯರ್‌ಲೆಸ್‌ ರಿವರ್ಸ್ ಪವರ್ ಹಂಚಿಕೆಯನ್ನು ಬೆಂಬಲಿಸುತ್ತದೆ. ಇನ್ನು ಸ್ಮಾರ್ಟ್‌ಫೋನ್‌ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ, ಈ ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಭಾರತದಲ್ಲಿ ಮೊಟೊರೊಲಾ ಎಡ್ಜ್ + ಬೆಲೆ 74,999 ರೂ. ಆಗಿದ್ದು, ಈ ಸ್ಮಾರ್ಟ್‌ಫೋನ್ ಸ್ಮೋಕಿ ಸಾಂಗ್ರಿಯಾ ಮತ್ತು ಥಂಡರ್ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಇದು ಮೇ 26 ರಿಂದ ಫ್ಲಿಪ್‌ಕಾರ್ಟ್ ಮತ್ತು ಪ್ರಮುಖ ಆಫ್‌ಲೈನ್ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಇನ್ನು ಲಾಂಚ್ ಆಫರ್‌ಗಳಲ್ಲಿ ಫ್ಲಾಟ್ ರೂ. ಫ್ಲಿಪ್‌ಕಾರ್ಟ್‌ನಲ್ಲಿ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ಮಾಡಿದ ಖರೀದಿಗಳಿಗೆ 7,500 ತ್ವರಿತ ರಿಯಾಯಿತಿಯನ್ನ ನೀಡಲಿದೆ.

Best Mobiles in India

English summary
Motorola Edge+ has been launched in India as Motorola's latest flagship phone.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+