ಮೊಟೊರೊಲಾ ಎಡ್ಜ್ S ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ ಲಾಂಚ್!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗುರುತಿಸಿಕೊಂಡಿರುವ ಮೊಟೊರೊಲಾ ಕಂಪೆನಿಯ ಮೊಟೊ ಸರಣಿ ಹೆಚ್ಚು ಗಮನ ಸೆಳೆದಿದೆ. ಸಂಸ್ಥೆಯ ಇತ್ತೀಚಿಗಿನ ಮೊಟೊರೊಲಾ ಎಡ್ಜ್‌ ಎಸ್‌ ಸ್ಮಾರ್ಟ್‌ಫೋನ್‌ ಗ್ರಾಹಕರನ್ನು ಆಕರ್ಷಿಸಿತ್ತು. ಇದೀಗ ಮೊಟೊರೊಲಾ ಕಂಪನಿಯು ಎಡ್ಜ್ ಸರಣಿಯಲ್ಲಿ ಮೊಟೊರೊಲಾ ಎಡ್ಜ್ ಎಸ್‌ ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ನೂತನವಾಗಿ ಮೊಟೊರೊಲಾ ಎಡ್ಜ್ ಎಸ್‌ ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 11 ಸಪೋರ್ಟ್‌ ಪಡೆದಿದೆ. ಡಿಸ್‌ಪ್ಲೇಯು 1,080x2,520 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 90Hz ಡಿಸ್‌ಪ್ಲೇ ರೀಫ್ರೇಶ್‌ ರೇಟ್ ಪಡೆದಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್‌ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಮೊಟೊರೊಲಾ ಎಡ್ಜ್‌ S ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ 1,080x2,520 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.7 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯ ಅನುಪಾತವು 21:9 ಆಗಿದ್ದು, HDR10 ಬೆಂಬಲವನ್ನು ಪಡೆದಿದೆ. ಇನ್ನು ಈ ಫೋನಿನ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಮೊಟೊರೊಲಾ ಎಡ್ಜ್‌ S ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಅಡ್ರಿನೊ 650 GPU ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶವನ್ನ ನೀಡಿಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಮೊಟೊರೊಲಾ ಎಡ್ಜ್‌ S ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್‌ ಸೆಲ್ಫಿ ಕ್ಯಾಮೆರಾ ಪಡೆದಿದ್ದು, ಮೊದಲನೇ ಕ್ಯಾಮೆರಾ 16 ಎಂಪಿ ಸೆನ್ಸಾರ್‌ನಲ್ಲಿದೆ ಹಾಗೂ ಸೆಕೆಂಡರಿ ಸೆಲ್ಫಿ ಕ್ಯಾಮೆರಾ 8ಎಂಪಿ ಆಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಎಡ್ಜ್‌ S ಪೈಯೋನಿಯರ್‌ ಎಡಿಷನ್ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ ವಿ 5.1, GPS, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಎಡ್ಜ್‌ S ಪೈಯೋನಿಯರ್‌ ಎಡಿಷನ್ 6GB + 128GB ವೇರಿಯಂಟ್ ಬೆಲೆಯು ಚೀನಾದಲ್ಲಿ CNY 1,999 ಆಗಿದೆ. (ಭಾರತದಲ್ಲಿ ಅಂದಾಜು 22,600ರೂ. ಎನ್ನಲಾಗಿದೆ). ಅದೇ ಎಮರಾಲ್ಡ್ ಲೈಟ್ ಮತ್ತು ಮಿಸ್ಟ್ ಕಲರ್ ಆಯ್ಕೆಗಳನ್ನು ಹೊಂದಿದೆ.

Best Mobiles in India

English summary
Motorola Edge S Pioneer Edition is essentially a gray colour variant of the Motorola Edge S with a cheaper price tag.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X