ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಮೊಟೊರೊಲಾ G ಸರಣಿಯ ಫೋನ್‌!

|

ಮೊಟೊರೊಲಾ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇನ್ನು ಎರಡು ದಿನಗಳ ಹಿಂದೆಯಷ್ಟೇ ತನ್ನ ಜಿ ಸರಣಿಯ ಐದು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಇವುಗಳನ್ನು ಮೋಟೋ G200, ಮೋಟೋ G71, ಮೋಟೋ G51, ಮೋಟೋ G41, ಮತ್ತು ಮೋಟೋ G31 ಎಂದು ಹೆಸರಿಸಲಾಗಿದೆ. ಇದೀಗ ತನ್ನ ಜಿ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಕೂಡ ಲಾಂಚ್‌ ಮಾಡಲಿದೆ ಎನ್ನಲಾಗಿದೆ.

ಮೊಟೊರೊಲಾ

ಹೌದು, ಮೊಟೊರೊಲಾ ಕಂಪೆನಿ ತನ್ನ ಜಿ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸಿದೆ. ಈ ಪೈಕಿ ಮೋಟೋ G200 ಸ್ನಾಪ್‌ಡ್ರಾಗನ್ 888+ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಮೋಟೋ G51 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಹೊಂದಿದ್ದು, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ ಹೊಂದಿದೆ. ಇನ್ನುಳಿದಂತೆ ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G200 ಸ್ಮಾರ್ಟ್‌ಫೋನ್‌

ಮೋಟೋ G200 ಸ್ಮಾರ್ಟ್‌ಫೋನ್‌

ಮೋಟೋ G200 ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್, HDR10 ಮತ್ತು DCI-P3 ಕಲರ್ ಗ್ಯಾಮಟ್ ಕವರೇಜ್ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋ G51

ಮೋಟೋ G51

ಮೋಟೋ G51 ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ಚಾರ್ಜಿಂಗ್‌ ಬೆಂಬಲಿಸಲಿದೆ.

ಮೋಟೋ G41

ಮೋಟೋ G41

ಮೋಟೋ G41 ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ+ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೆಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 ಪ್ರೊಸೆಸರ್‌ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಟರ್ಬೊ ಚಾರ್ಜ್ 30 ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಮೋಟೋ G200 ಅನ್ನು 450 ಯುರೋ ಬೆಲೆಯಲ್ಲಿ ಲಾಂಚ್‌ ಮಾಡಲಾಗಿದೆ. ಭಾರತದಲ್ಲಿ ಇದು 37,900ರೂ ಬೆಲೆ ಹೊಂದುವ ನಿರೀಕ್ಷೆಯಿದೆ. ಇನ್ನು ಮೋಟೋ G51 ಬೆಲೆ 230 ಯುರೋ (ಸುಮಾರು 19,372ರೂ) ಲಭ್ಯವಿದೆ. ಆದಾಗ್ಯೂ, G41 ಅನ್ನು 249 ಯುರೋಗಳಿಗೆ (21,000) ಬಿಡುಗಡೆ ಮಾಡಲಾಗಿದೆ. ಸದ್ಯ ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳು ಭಾರತಕ್ಕೆ ಶೀಘ್ರದಲ್ಲೇ ಎಂಟ್ರಿ ನೀಡುವ ಸಾಧ್ಯತೆ ಇದೆ.

Best Mobiles in India

English summary
Motorola G series smartphones like G200, G71, G51, G41, G31 to launch in India soon.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X