ನಾಳೆ ಮೊಟೊ G04s ಫಸ್ಟ್ ಸೇಲ್; ಅಗ್ಗದ ಬೆಲೆಗೆ ಲಭ್ಯ, ಆಕರ್ಷಕ ಫೀಚರ್ಸ್!
ಲೀಡಿಂಗ್ ಬ್ರ್ಯಾಂಡ್ ಎನಿಸಿರುವ ಮೊಟೊ ಕಂಪನಿಯ ಮೊಟೊ G04s ಮೊಬೈಲ್ ಎಂಟ್ರಿ ಲೆವೆಲ್‌ನಲ್ಲಿ ಗುರುತಿಸಿಕೊಂಡಿದ್ದು, ಅಗ್ಗದ ಪ್ರೈಸ್‌ಟ್ಯಾಗ್ ಪಡೆದುಕೊಂಡಿದೆ. ಈ ಸ್ಟೈಲಿಶ್ ಮೊಬೈಲ್ ನಾಳೆ (ಜೂನ್ 5 ರಂದು) ಅಧಿಕೃತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ (Flipkart) ವೆನ್‌ಸೈಟ್ ಮೂಲಕ ಪ್ರಥಮ ಸೇಲ್ ಶುರು ಮಾಡಲಿದೆ. ಅಗ್ಗದ ದರದಲ್ಲಿ ಕಾಣಿಸಿಕೊಂಡಿದ್ದರು ಕೂಡಾ ಕೆಲವೊಂದು ಆಕರ್ಷಕ ಫೀಚರ್ಸ್‌ಗಳಿಂದ ಮಾರುಕಟ್ಟೆಯ ಚಿತ್ತ ಸೆಳೆದಿದೆ. ಈ ಫೋನಿನ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ.
ಹೌದು, ಮೊಟೊ G04s (Moto G04s) ಮೊಬೈಲ್ ನಾಳೆ ಫ್ಲಿಪ್‌ಕಾರ್ಟ್ ತಾಣದ ಮೂಲಕ ಮಾರಾಟ (sale) ಪ್ರಾರಂಭ ಮಾಡಲಿದೆ. ಈ ಮೊಬೈಲ್ 4 GB RAM + 64 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, 50 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಹಾಗೆಯೇ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ.

ಇನ್ನು ಮೊಟೊ G04s ಫೋನ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಇದರ ಆರಂಭಿಕ ವೇರಿಯಂಟ್ ಬೆಲೆಯು 6,999ರೂ. ಆಗಿದೆ. ಆಸಕ್ತ ಖರೀದಿದಾರರು ಫ್ಲಿಪ್‌ಕಾರ್ಟ್ ತಾಣದಲ್ಲಿ, ಮೊಟೊರೊಲಾ ವೆಬ್‌ಸೈಟ್ ಹಾಗೂ ಪ್ರಮುಖ ರೀಟೇಲ್ ಸ್ಟೋರ್‌ಗಳಲ್ಲಿ ಖರೀದಿಸಬಹುದು. ಹಾಗಾದರೆ ಮೊಟೊ G04s ಫೋನಿನ ಇತರೆ ಫೀಚರ್ಸ್ ಯಾವುವು ಹಾಗೂ ಆಫರ್ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಮೊಟೊ G04s - ಫೀಚರ್ಸ್
ಮೊಟೊ G04s ಫೋನ್ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಬ್ಯ ಪಡೆದಿದೆ. 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ, ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಮೊಟೊ G04s ಫೋನ್ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಬೆಂಬಲ ಸಹ ಪಡೆದಿದೆ. ಇದರೊಂದಿಗೆ 4 GB RAM + 64 GB ವೇರಿಯಂಟ್ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಇದೆ.
ಮೊಟೊ G04s ಮೊಬೈಲ್ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಪಡೆದಿದ್ದು, ಅದು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಲೈಟ್ ಸಪೋರ್ಟ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 5 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ.
ಮೊಟೊ G04s ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 15W ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.


Click it and Unblock the Notifications








