Home
ಸುದ್ದಿಜಾಲ

ಮೊಟೊರೊಲಾದ ಈ ಫೋನಿನ ಡಿಸ್ಕೌಂಟ್‌ ಬೆಲೆಗೆ ನೀವು ಫಿದಾ ಆಗ್ತೀರಾ!

ಲೀಡಿಂಗ್ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮುಖ್ಯವಾಗಿ ಮೊಬೈಲ್‌ಗಳಿಗೂ ಒಂದಿಲ್ಲೊಂದು ರಿಯಾಯಿತಿ ಘೋಷಿಸುತ್ತದೆ. ಅದೇ ರೀತಿ ಯಾವುದಾದರೂ ವಿಶೇಷ ಮಾರಾಟಗಳಲ್ಲಿ ಹೆಚ್ಚಿನ ರಿಯಾಯಿತಿ ಖಚಿತವಾಗಿರುತ್ತದೆ. ಸದ್ಯ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ G04s (Motorola g04s) ಮೊಬೈಲ್‌ ಗಮನಾರ್ಹ ದರ ಇಳಿಕೆ ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡುತ್ತದೆ.

ಹೌದು, ದೈತ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತನ್ನ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ G04s (Motorola g04s) ಮೊಬೈಲ್‌ ಶೇ. 30% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಪಡೆದುಕೊಂಡಿದೆ. ಈ ಮೊಬೈಲ್‌ನ 4 GB RAM + 64 GB ವೇರಿಯಂಟ್‌ ಆಫರ್‌ನಲ್ಲಿ 6,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಲಭ್ಯ ಇರುವ ಎಲ್ಲ ಕೊಡುಗೆ ಪಡೆದುಕೊಂಡರೇ, ಇದನ್ನು ಇನ್ನಷ್ಟು ಡಿಸ್ಕೌಂಟ್‌ಗೆ ದೊರೆಯುತ್ತದೆ.

ಮೊಟೊರೊಲಾದ ಈ ಫೋನಿನ ಡಿಸ್ಕೌಂಟ್‌ ಬೆಲೆಗೆ ನೀವು ಫಿದಾ ಆಗ್ತೀರಾ!

ಇನ್ನು ಮೊಟೊ G04s ಫೋನ್‌ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಆಸಕ್ತ ಖರೀದಿದಾರರು ಫ್ಲಿಪ್‌ಕಾರ್ಟ್‌ ತಾಣದಲ್ಲಿ, ಮೊಟೊರೊಲಾ ವೆಬ್‌ಸೈಟ್‌ ಹಾಗೂ ಪ್ರಮುಖ ರೀಟೇಲ್‌ ಸ್ಟೋರ್‌ಗಳಲ್ಲಿ ಖರೀದಿಸಬಹುದು. ಹಾಗಾದರೆ ಮೊಟೊ G04s ಫೋನಿನ ಇತರೆ ಫೀಚರ್ಸ್‌ ಯಾವುವು ಹಾಗೂ ಆಫರ್‌ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ G04s - ಫೀಚರ್ಸ್‌

ಮೊಟೊರೊಲಾ G04s ಫೋನ್‌ 6.56 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಮೊಬೈಲ್‌ ಡಿಸ್‌ಪ್ಲೇ 1,612 x 720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಬ್ಯ ಪಡೆದಿದೆ. 90Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ, ಗೊರಿಲ್ಲಾ ಗ್ಲಾಸ್‌ 3 ರಕ್ಷಣೆ ಸಹ ಪಡೆದುಕೊಂಡಿದೆ.

ಮೊಟೊರೊಲಾ G04s ಫೋನ್‌ ಆಕ್ಟಾ ಕೋರ್ Unisoc T606 ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಓಎಸ್ ಅನ್ನು ಸಪೋರ್ಟ್‌ ಸಹ ಪಡೆದಿದೆ. ಇದರೊಂದಿಗೆ 4 GB RAM + 64 GB ವೇರಿಯಂಟ್‌ ಆಯ್ಕೆ ಒಳಗೊಂಡಿದ್ದು, ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್‌ ಹೆಚ್ಚಿಗೆ ಮಾಡಿಕೊಳ್ಳಲು ಚಾನ್ಸ್‌ ಸಹ ಪಡೆದಿದೆ.

ಮೊಟೊರೊಲಾ G04s ಮೊಬೈಲ್‌ ಹಿಂಭಾಗದಲ್ಲಿ ಸಿಂಗಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಅದು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್‌ ಲೈಟ್ ಸಪೋರ್ಟ್‌ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 5 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ.

ಮೊಟೊರೊಲಾ G04s ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 15W ಚಾರ್ಜಿಂಗ್ ಬೆಂಬಲ ಪಡೆದಿದೆ. ಅಲ್ಲದೇ ಇದು ಸೈಡ್ - ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆ ಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್-ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್‌ ಕಾನ್ಕಾರ್ಡ್ ಬ್ಲಾಕ್, ಸೀ ಗ್ರೀನ್, ಸ್ಯಾಟಿನ್ ಬ್ಲೂ ಮತ್ತು ಸನ್‌ರೈಸ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Motorola g04s received fabulous price cuts in india via flipkart. Check out offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+