ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನಿಗೂ ಈಗ ಜಬರ್ದಸ್ತ್ ಆಫರ್!..ಸಖತ್ ಉಳಿತಾಯ!
ಜನಪ್ರಿಯ ಮೊಟೊರೊಲಾ ಮೊಬೈಲ್ ಸಂಸ್ಥೆಯು ಇಂದಿಗೂ ತನ್ನ ಬ್ರ್ಯಾಂಡ್ ಉಳಿಸಿಕೊಂಡಿದ್ದು, ಇತ್ತೀಚಿನ ಕೆಲವು ಫೋನ್‌ಗಳ ಮೂಲಕ ಸದ್ದು ಮಾಡುತ್ತಿದೆ. ಆ ಪೈಕಿ ಮೊಟೊರೊಲಾ ಕಂಪನಿಯ ಮೊಟೊ G13 ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಬೆಲೆಗೆ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ನಲ್ಲಿ ಮೊಟೊ G13 ಸ್ಮಾರ್ಟ್‌ಫೋನ್ ಶೇ. 28% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 4 GB RAM + 128 GB ಸ್ಟೋರೇಜ್ ವೇರಿಯಂಟ್ 13,999ರೂ. ಬೆಲೆಯನ್ನು ಪಡೆದುಕೊಂಡಿದ್ದು, ಆಫರ್‌ನಲ್ಲಿ ಈ ಫೋನ್ 9,999. ಗಳಿಗೆ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಗ್ರಾಹಕರಿಗೆ ಆಯ್ದ ಬ್ಯಾಂಕ್ ಆಫರ್ ಕೊಡುಗೆಗಳು ಸಹ ದೊರೆಯುತ್ತದೆ.

ಮೊಟೊ G13 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಕಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಇದರ ಪ್ರಾಥಮಿಕ ಕ್ಯಾಮೆರಾವು 50ಎಂಪಿ ಸೆನ್ಸಾರ್ ನಲ್ಲಿದ್ದು, 8ಎಂಪಿ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗಾದರೇ ಮೊಟೊ G13 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಡಿಸೈನ್ ಮತ್ತು ವಿನ್ಯಾಸ
ಮೊಟೊ G13 ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಹೆಚ್‌ಡಿ+ ರೆಸಲ್ಯೂಶನ್ ಡಿಸ್‌ಪ್ಲೇ ಪಡೆದಿದ್ದು, ಇದು 576Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ ಈ ಡಿಸ್‌ಪ್ಲೇ ಪಾಂಡ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ ವೈಖರಿಯ ಮಾಹಿತಿ
ಮೊಟೊ G13 ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ರನ್ ಆಗುತ್ತದೆ. ಇದರೊಂದಿಗೆ 4 GB RAM ಹಾಗೂ 128 GB ಆಂತರೀಕ ಸ್ಟೋರೇಜ್ ಆಯ್ಕೆ ನೀಡಲಾಗಿದ್ದು, ಈ ಸ್ಟೋರೇಜ್ ಅನ್ನು ವಿಸ್ತರಣೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ಅನ್ನು ಪಡೆದಿದೆ.
ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಮಾಹಿತಿ
ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಅವುಗಳಲ್ಲಿ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾ ಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಹಾಗೂ 2 ಮೆಗಾ ಪಿಕ್ಸೆಲ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ
ಮೊಟೊ G13 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿಯಿಂದ ಭರ್ತಿ ಆಗಿದ್ದು, ಇದಕ್ಕೆ ಪೂರಕವಾಗಿ ಈ ಫೋನ್ 10W ಚಾರ್ಜಿಂಗ್ ಬೆಂಬಲ ಪಡೆದಿದೆ. ತನ್ನ ವರ್ಗದಲ್ಲೇ ಇದು ಉತ್ತಮ ಎಂದು ಹೇಳಬಹುದು.
ಇತರೆ ಸೌಲಭ್ಯಗಳ ಮಾಹಿತಿ
ಮೊಟೊ G13 ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಪಡೆದಿದ್ದು, ಚಾರ್ಜಿಂಗ್ ಗಾಗಿ ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಪೋರ್ಟ್ ಪಡೆದಿದೆ. ಇದರೊಂದಿಗೆ ಡ್ಯುಯಲ್ 4G VoLTE, ವೈ ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್ ಹೊಂದಿದ್ದು, 3.5 ಎಂಎಂ ಆಡಿಯೊ ಜಾಕ್, ಸ್ಟಿರಿಯೊ ಸ್ಪೀಕರ್ ಗಳು, ಡಾಲ್ಬಿ ಅಟ್ಮಾಸ್ ಸೌಂಡ್ ನೊಂದಿಗೆ IP52 ರೇಟಿಂಗ್ ಒಳಗೊಂಡಿದೆ.


Click it and Unblock the Notifications








