ಅಗ್ಗದ ಬೆಲೆಗೆ ಎಂಟ್ರಿ ಕೊಡಲಿದೆ ಈ ಸ್ಮಾರ್ಟ್‌ಫೋನ್!..ಬೊಂಬಾಟ್ ಕ್ಯಾಮೆರಾ!
ಮೊಟೊರೊಲಾ ಸಂಸ್ಥೆಯು ಸಹ ಪ್ರಮುಖ ಸ್ಮಾರ್ಟ್‌ಫೋನ್ ಕಂಪನಿಗಳ ಸಾಲಿನಲ್ಲಿ ಕಾಣಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಈಗಾಗಲೇ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಹಲವು ಬಜೆಟ್ ದರದ ಫೋನ್ ಪರಿಚಯಿಸಿರುವ ಸಂಸ್ಥೆಯು ಈಗ ಮತ್ತೆ ಅದೇ ಹಾದಿಯಲ್ಲಿ ಮುಂದೆ ಸಾಗಿದ್ದು, ಹೊಸದಾಗಿ ಮೊಬೈಲ್ ಲಾಂಚ್ ಮಾಡಲು ತಯಾರಾಗಿದೆ. ಬರಲಿರುವ ನೂತನ ಫೋನ್ ಮೊಟೊರೊಲಾ G14 ಆಗಿದೆ.
ಹೌದು, ಮೊಟೊರೊಲಾ ಮೊಬೈಲ್ ಕಂಪನಿಯು ಈಗ G ಸರಣಿಯಲ್ಲಿ ನೂತನವಾಗಿ ಮೊಟೊರೊಲಾ G14 ಮೊಬೈಲ್ ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದ್ದು, ಇದೇ ಆಗಷ್ಟ್ 1 ರಂದು ಅಧಿಕೃತವಾಗಿ ದೇಶಿಯ ಮಾರುಕಟ್ಟೆಗೆ ಲಾಂಚ್ ಮಾಡಲಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೊಟೊರೊಲಾ G14 ಬಗ್ಗೆ ಇದನ್ನು ದೃಢಪಡಿಸಿದೆ.

ಇನ್ನು ಮೊಟೊರೊಲಾ G14 ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಬಾಹ್ಯ ಮೆಮೊರಿಯನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ವಿಸ್ತರಿಸುವ ಅವಕಾಶ ಪಡೆದುಕೊಂಡಿದೆ. ಹಾಗಾದರೇ ಮೊಟೊರೊಲಾ G14 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ G14 ಡಿಸ್‌ಪ್ಲೇ ರಚನೆ ಹೇಗಿರಲಿದೆ : ಈ ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ+ ರೆಸಲ್ಯೂಶನ್ ಡಿಸ್‌ಪ್ಲೇ ಪಡೆದಿದ್ದು, ಇದು ಉತ್ತಮ ಸ್ಕ್ರೀನ್ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ IP 54 ರೇಟಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ಮೊಟೊರೊಲಾ G14 ಪ್ರೊಸೆಸರ್ ಪವರ್ ಯಾವುದು : ಮೊಟೊರೊಲಾ G14 ಫೋನ್ ಮೀಡಿಯಾಟೆಕ್ ಹೆಲಿಯೊ ಜಿ85 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ರನ್ ಆಗುತ್ತದೆ. ಅಲ್ಲದೇ ಆಂಡ್ರಾಯ್ಡ್ 14 ಅಪ್‌ಡೇಟ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ 4 GB RAM ಸ್ಟೋರೇಜ್ ಆಯ್ಕೆ ನೀಡಲಾಗಿದ್ದು, ಬಾಹ್ಯ ಮೆಮೊರಿಯನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ವಿಸ್ತರಿಸುವ ಅವಕಾಶ ಪಡೆದುಕೊಂಡಿದೆ.
ಮೊಟೊರೊಲಾ G14 ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ರಚನೆ : ಮೊಟೊರೊಲಾ G14 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಅದರಲ್ಲಿ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾ ಸೆನ್ಸರ್ ಅನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಅನ್ನು ಒದಗಿಸಲಾಗಿದೆ.
ಮೊಟೊರೊಲಾ G14 ಇತರೆ ಸೌಲಭ್ಯಗಳು: ಮೊಟೊರೊಲಾ G14 ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಹೊಂದಿದ್ದು, ಚಾರ್ಜಿಂಗ್ ಗಾಗಿ ಯುಎಸ್‌ಬಿ ಟೈಪ್ ಸಿ ಚಾರ್ಜಿಂಗ್ ಪೋರ್ಟ್ ಪಡೆದಿದೆ. ಇದಲ್ಲದೆ ಈ ಫೋನ್ ಡ್ಯುಯಲ್ 4G VoLTE, ವೈ ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್ ಪಡೆದಿದ್ದು, 3.5 ಎಂಎಂ ಆಡಿಯೊ ಜಾಕ್, ಸ್ಟಿರಿಯೊ ಸ್ಪೀಕರ್ ಗಳು, ಡಾಲ್ಬಿ ಅಟ್ಮಾಸ್ ಸೌಂಡ್ ನೊಂದಿಗೆ IP54 ರೇಟಿಂಗ್ ಸೌಲಭ್ಯ ಸಹ ಪಡೆದಿದೆ.
ಮೊಟೊರೊಲಾ G14 ಬೆಲೆ ಮತ್ತು ಲಾಂಚ್ ವಿವರ : ಮೊಟೊರೊಲಾ G14 ಫೋನ್ ಇದೇ ಆಗಷ್ಟ್ 1 ರಂದು ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಇನ್ನು ಈ ಫೋನ್ ಅಗ್ಗದ ಪ್ರೈಸ್ ಟ್ಯಾಗ್‌ನಲ್ಲಿ ಮಾರುಕಟ್ಟೆಯಲ್ಲಿ ಪೈಪೋಟಿಗೆ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








