Home
ಸುದ್ದಿಜಾಲ

ಅಧಿಕ ಬ್ಯಾಟರಿ ಇರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!..ಆಫರ್‌ ತಿಳಿದ್ರೆ, ವಾವ್‌ ಅಂತೀರಾ!

ಮೊಟೊ ಮೊಬೈಲ್‌ ಸಂಸ್ಥೆಯ ಎಂಟ್ರಿ ಲೆವೆಲ್‌ ಫೋನ್‌ಗಳ ಪೈಕಿ ಒಂದಾಗಿರುವ ಮೊಟೊ G24 ಪವರ್‌ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಬೊಂಬಾಟ್‌ ರಿಯಯಾತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ವಾವ್‌ ಎನ್ನುವಂತೆ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಮೊಟೊರೊಲಾ G24 ಪವರ್‌ ಸ್ಮಾರ್ಟ್‌ಫೋನ್‌ ಶೇ. 33% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ನ ಡಿಸ್ಕೌಂಟ್‌ ದರವು 7,999ರೂ. ಗಳು ಆಗಿದೆ. ಇದರೊಂದಿಗೆ ಎಕ್ಸ್‌ಚೇಂಜ್‌ ಕೊಡುಗೆ, ಇತರೆ ಬ್ಯಾಂಕ್‌ ಆಫರ್‌ಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಅಧಿಕ ಬ್ಯಾಟರಿ ಇರುವ ಈ ಫೋನ್‌ ಬೆಲೆಯಲ್ಲಿ ಇಳಿಕೆ!ಆಫರ್‌ ತಿಳಿದ್ರೆ, ವಾವ್‌ ಅಂತೀರಾ

ಇನ್ನು ಈ ಫೋನ್‌ 4 GB RAM + 128 GB ಹಾಗೂ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಸೌಲಭ್ಯ ಒಳಗೊಂಡಿದೆ. ಹಾಗಾದರೇ ಮೊಟೊ G24 ಪವರ್‌ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊ G24 ಪವರ್‌ ಮೊಬೈಲ್‌ - ಫೀಚರ್ಸ್‌

ಮೊಟೊ G24 ಪವರ್‌ ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಫೋನ್ 90Hz ರಿಫ್ರೆಶ್ ರೇಟ್‌ ಆಯ್ಕೆ ಜೊತೆಗೆ ಸ್ಟಿರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮಾಸ್ ಸೌಲಭ್ಯ ಸಹ ಪಡೆದಿದೆ. ಅಲ್ಲದೆ ಈ ಫೋನ್‌ 537 ನಿಟ್ಸ್‌ ಬ್ರೈಟ್‌ನೆಸ್‌ ಆಯ್ಕೆ ಇದೆ.

ಮೊಟೊ G24 ಪವರ್‌ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G85 12nm ಪ್ರೊಸೆಸರ್ ಮೂಲಕ ಕೆಲಸ ಮಾಡಲಿದ್ದು, ಆಂಡ್ರಾಯ್ಡ್‌ 14 ಅನ್ನು ಸಪೋರ್ಟ್ ಇದೆ. ಇದಲ್ಲದೇ 4 GB RAM + 128 GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು 1TB ವರೆಗೆ ಸ್ಟೋರೇಜ್‌ ಹೆಚ್ಚಿಗೆ ಮಾಡಿಕೊಳ್ಳಲು ಚಾನ್ಸ್‌ ಸಹ ಇದೆ.

ಮೊಟೊ G24 ಪವರ್‌ ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಈ ಪೋನಿನ ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದ್ದು, ಇದೂ ಸಹ ಎಲ್‌ಇಡಿ ಫ್ಲ್ಯಾಶ್‌ ಬೆಂಬಲ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾ ನೀಡಲಾಗಿದೆ.

ಮೊಟೊ G24 ಪವರ್‌ ಮೊಬೈಲ್‌ 6,000mAh ಬ್ಯಾಟರಿ ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.0, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಗಳನ್ನು ಒಳಗೊಂಡಿದೆ.

ಈ ಫೋನ್ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 4GB + 128GB ಹಾಗೂ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಗಿವೆ. ಇದರ ಜೊತೆಗೆ 8GB ವರ್ಚುವಲ್‌ RAM ಅವಕಾಶವು ಇದೆ. ಇನ್ನು ಈ ಫೋನ್ ಮ್ಯಾಟ್ ಚಾರ್ಕೋಲ್, ಐಸ್ ಗ್ರೀನ್, ಬ್ಲೂಬೆರ್ರಿ ಮತ್ತು ಪಿಂಕ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Motorola g24 Power mobile price drop in India. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+