Home
ಸುದ್ದಿಜಾಲ

ಮೊಟೊ ಸಂಸ್ಥೆಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಇಳಿಕೆ!..ಕಡಿಮೆ ಬೆಲೆಗೆ ಸಿಗುತ್ತೆ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಮೊಟೊರೊಲಾ ಸಂಸ್ಥೆಯು ಕಡಿಮೆ ಬೆಲೆಯಿಂದ ಹೈ ಎಂಡ್ ಮಾದರಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಕಡಿಮೆ ಬೆಲೆಯಲ್ಲಿ ಕಾಣಿಸಿಕೊಂಡಿರುವ ಮೊಟೊ G32 ಸ್ಮಾರ್ಟ್‌ಫೋನ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇದೀಗ ಈ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದ್ದು, ಮತ್ತೊಮ್ಮೆ ಗ್ರಾಹಕರನ್ನು ಸೆಳೆದಿದೆ.

ಫ್ಲಿಪ್‌ಕಾರ್ಟ್‌

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್‌ ಬೊಂಬಾಟ್‌ ಕೊಡುಗೆಯಲ್ಲಿ ಕಾಣಿಸಿಕೊಂಡಿದೆ. ಮೊಟೊ G32 ಫೋನಿನ 4 GB RAM + 64 GB ವೇರಿಯಂಟ್‌ ಬೆಲೆಯು 16,999ರೂ. ಆಗಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ 9,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ, ಕೆಲವು ಆಯ್ದ ಬ್ಯಾಂಕ್‌ಗಳ ರಿಯಾಯಿತಿ ಸಹ ಲಭ್ಯವಾಗಲಿದೆ. ಹಾಗಾದರೆ ಮೊಟೊ G32 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G32 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ G32 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಮೊಟೊ G32 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಮೊಟೊ G32 ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್‌, ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌ ಮತ್ತು ಇ-ಕಂಪಾಸ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಮಾದರಿಯ ಆಯ್ಕೆ ಪಡೆದಿದೆ. ಇನ್ನು ಈ ಫೋನ್‌ ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ.

Best Mobiles in India

English summary
Motorola G32 phone available at huge discount price on Flipkart.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+