ಮೊಟೊ ಸಂಸ್ಥೆಯ ಈ ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಖುಷಿ!
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಸಂಸ್ಥೆಯು ಏನಾದರೊಂದು ಕೊಡುಗೆ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಹಾಗೆಯೇ ಮೊಬೈಲ್‌ಗಳಿಗೂ ಭರ್ಜರಿ ರಿಯಾಯಿತಿ ಫ್ಲಿಪ್‌ಕಾರ್ಟ್‌ನಲ್ಲಿ ಕಾಣಬಹುದಾಗಿದೆ. ಸದ್ಯ ಮೊಟೊ ಕಂಪನಿಯ ಮೊಟೊ G32 ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ಪಡೆದಿದ್ದು, ಮೊಬೈಲ್ ಪ್ರಿಯರು ಹಿಂತಿರುಗಿ ನೋಡುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಮೊಟೊ G32 ಮೊಬೈಲ್ ಶೇ. 47% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ 8 GB RAM + 128 GB ವೇರಿಯಂಟ್ 9,999ರೂ. ಗಳ ಕೊಡುಗೆಯ ದರದಲ್ಲಿ ಖರೀದಿ ಮಾಡಬಹುದಾಗಿದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಹಾಗೂ ನೋ ಕಾಸ್ಟ್ ಇಎಮ್‌ಐ ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

ಈ ಮೊಬೈಲ್ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಸೌಲಭ್ಯ ಪಡೆದಿದೆ. ಹಾಗಾದರೆ ಮೊಟೊ G32 ಮೊಬೈಲ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಮೊಟೊ G32 ಸ್ಮಾರ್ಟ್‌ಫೋನ್ - ಫೀಚರ್ಸ್
ಮೊಟೊ ಸಂಸ್ಥೆಯ ಈ ಮೊಬೈಲ್ 6.5 ಇಂಚಿನ ಫುಲ್ HD+ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ.
ಮೊಟೊ G32 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯ ಅನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ಪಡೆದಿದೆ.
ಮೊಟೊ ಕಂಪನಿಯ ಈ ಫೋನ್ ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದಿದೆ. ಇದರೊಂದಿಗೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ನೀಡಲಾಗಿದೆ.
ಮೊಟೊ ಸಂಸ್ಥೆಯ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿ ಅನ್ನು ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಪಡೆದಿದೆ. ಇದರ ಜೊತೆಗೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್, ವೇಗ ವರ್ಧಕ, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್ ಸೆನ್ಸಾರ್ ಮತ್ತು ಇ-ಕಂಪಾಸ್ ಅನ್ನು ಕಾಣಬಹುದಾಗಿದೆ.


Click it and Unblock the Notifications








