OMG!..18,999ರೂ. ಬೆಲೆಯ ಈ ಫೋನ್ ಇಷ್ಟೊಂದು ಕಡಿಮೆ ಬೆಲೆಗೆ ಲಭ್ಯ!
ಮೊಟೊರೊಲಾ ಮೊಬೈಲ್ ಕಂಪನಿಯು G ಸರಣಿಯಲ್ಲಿ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಮೊಟೊ G32 ಮೊಬೈಲ್ ಅವುಗಳಲ್ಲಿ ಒಂದಾಗಿದ್ದು, ಈ ಫೋನ್ ತನ್ನ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಖರೀದಿಸುವ ಗ್ರಾಹಕರಿಗೆ ಈಗ ಸಿಹಿಸುದ್ದಿ ಲಭ್ಯ ಇದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೊಟೊ G32 ಫೋನ್ ಶೇ. 36% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್ ಪ್ರೈಸ್ 18,999 ರೂ. ಗಳು ಆಗಿದ್ದು, ಆಫರ್‌ನಲ್ಲಿ 11,999 ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಇನ್ನು ಮೊಟೊ G32 ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಹಾಗೆಯೇ ಈ ಫೋನ್ ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಅಲ್ಲದೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗಾದರೆ ಮೊಟೊ G32 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಮೊಟೊ G32 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಮಾಹಿತಿ :
ಮೊಟೊ G32 ಮೊಬೈಲ್ 6.5 ಇಂಚಿನ ಫುಲ್ HD+ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಹೊಂದಿದೆ. ಈ ಫೋನ್ 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 85.48 % ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ ವನ್ನು ಪಡೆದುಕೊಂಡಿದೆ.
ಮೊಟೊ G32 ಪ್ರೊಸೆಸರ್ ಪವರ್ ಕಾರ್ಯವೈಖರಿ :
ಮೊಟೊ G32 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಈ ಪ್ರೊಸೆಸರ್‌ಗೆ ಅನುಗುಣವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯ ಮಾಡಲಿದೆ. ಈ ಫೋನ್ 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಮೆಮೊರಿ ವಿಸ್ತರಿಸಬಹುದಾಗಿದೆ.
ಮೊಟೊ G32 ಕ್ಯಾಮೆರಾ ಸೆನ್ಸಾರ್ ಎಷ್ಟಿದೆ :
ಮೊಟೊ G32 ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.
ಮೊಟೊ G32 ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ :
ಮೊಟೊ G32 ಮೊಬೈಲ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಸಪೋರ್ಟ್ ಆಗಿ 33W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿ ಅನ್ನು ಪಡೆದುಕೊಂಡಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್ C ಸೌಲಭ್ಯ ಕೂಡಾ ಪಡೆದಿದೆ.


Click it and Unblock the Notifications








