Motorola: ಮೊಟೊರೊಲಾದ ಈ 8 GB RAM ಆಯ್ಕೆಯ ಫೋನ್‌ಗೆ ಮತ್ತೇ ಡಿಸ್ಕೌಂಟ್! 50MP ಕ್ಯಾಮೆರಾ
ಮೊಟೊರೊಲಾ (Motorola) ಫೋನ್‌ಗಳು ಕಡಿಮೆ ದರದಲ್ಲಿ ಉತ್ತಮ ಸ್ಟೋರೇಜ್ ಆಯ್ಕೆಯನ್ನು ನೀಡುತ್ತವೆ. ಅದರಂತೆ ಬಜೆಟ್ ಬೆಲೆಯ ಫೋನ್‌ಗೆ ಆಗಾಗ್ಗೆ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಆಫರ್ ನೀಡಲಾಗುತ್ತಿದ್ದು, ಇದೀಗ ಮತ್ತೇ ಈ ಫೋನ್‌ಗೆ ಇನ್ನೂ ಹೆಚ್ಚಿನ ಆಫರ್ ನೀಡಲಾಗಿದೆ. ಈ ಮೂಲಕ ಹೆಚ್ಚು ಸೇಲ್ ಆಗುತ್ತಿರುವ ಅಗ್ಗದ ದರದ ಫೋನ್ ಆಗಿ ಗುರುತಿಸಿಕೊಂಡಿದೆ.
ಹೌದು, ಮೊಟೊರೊಲಾ G32 ಸ್ಮಾರ್ಟ್‌ಫೋನ್‌ಗೆ (Motorola G32 Smartphone) ಇದೀಗ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಭರ್ಜರಿ ಆಫರ್ ಘೋಷಣೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 8 GB RAM ಆಯ್ಕೆ ಪಡೆದಿದ್ದು, 5000 mAh ಸಾಮರ್ಥ್ಯದ ಬ್ಯಾಟರಿ ಶಕ್ತಿ ಪಡೆದಿದೆ. ಹಾಗಿದ್ರೆ, ಈ ಫೋನ್‌ಗೆ ಇರುವ ಆಫರ್ ಹಾಗೂ ಈ ಫೋನ್ ಏನೆಲ್ಲಾ ವಿಶೇಷ ಫೀಚರ್ಸ್ ಹೊಂದಿದೆ ಅನ್ನೋ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಮೊಟೊರೊಲಾ G32 ಸ್ಮಾರ್ಟ್‌ಫೋನ್ ಆಫರ್ ವಿವರ: ಈ ಸ್ಮಾರ್ಟ್‌ಫೋನ್ 18,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 9,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್ ಈ ಫೋನ್‌ಗೆ ಬರೋಬ್ಬರಿ 47% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್ ಆಫರ್ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಇದನ್ನು ಖರೀದಿ ಮಾಡಬಹುದು.
ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವ್ಯವಹಾರದ ಮೇಲೆ 10% ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೇಲೆ 5% ಕ್ಯಾಶ್‌ಬ್ಯಾಕ್, ಜೊತೆಗೆ ಈ ಫೋನ್ ಖರೀದಿ ಮಾಡಿ ಎಸಿ ಖರೀದಿ ಮಾಡಿದ್ರೆ ಅದರಲ್ಲೂ ರಿಯಾಯಿತಿ ಪಡೆಯಬಹುದಾಗಿದೆ. ಹಾಗಿದ್ರೆ, ಈ ಫೋನ್ ಇಷ್ಟು ಕಡಿಮೆ ಬೆಲೆಗೆ ಲಭ್ಯ ಆಗುತ್ತಿರುವುದನ್ನು ನೋಡಿ ಕಣ್ಣು ಮುಚ್ಚಿಕೊಂಡು ಖರೀದಿ ಮಾಡಲು ಮುಂದಾಗಬೇಡಿ. ಬದಲಾಗಿ ಇದರ ಫೀಚರ್ಸ್ ಕಡೆಯೂ ಕಣ್ಣಾಯಿಸಿ.

ಮೊಟೊರೊಲಾ G32 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, 85.4% ಸ್ಕ್ರೀನ್-ಟು-ಬಾಡಿ ಅನುಪಾತ ಹಾಗೂ 405 ಪಿಪಿಐ ಸಾಂದ್ರತೆ ಮೂಲಕ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.
ಮೊಟೊರೊಲಾ G32 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 12 ಓಎಸ್ ಅನ್ನು ರನ್ ಮಾಡಲಿದ್ದು, ಆಂಡ್ರಾಯ್ಡ್ 13 ಗೆ ಅಪ್‌ಗ್ರೇಡ್ ಮಾಡಬಹುದಾಗಿದೆ. ಇದರೊಂದಿಗೆ ಕ್ವಾಲ್ಕಾಮ್ SM6225 ಸ್ನಾಪ್ಡ್ರಾಗನ್ 680 4G (6 nm) ಪ್ರೊಸೆಸರ್ ಬಲ ಹಾಗೂ ಅಡ್ರಿನೊ 610 ಗ್ರಾಫಿಕ್ಸ ಕಾರ್ಡ್ ಬೆಂಬಲದೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದೆ. ಇನ್ನು ಆಫರ್ ಬೆಲೆಗೆ ಲಭ್ಯ ಇರುವ ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ. ಅದಾಗ್ಯೂ ನೀವು ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು ಸ್ಟೋರೇಜ್ ಅನ್ನು ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಮೊಟೊರೊಲಾ G32 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ ಸೆನ್ಸರ್ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಅನ್ನು ಪಡೆದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಕ್ಯಾಮೆರಾಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್ ಪನೋರಮಾ ಫೀಚರ್ಸ್ ಆಯ್ಕೆ ಪಡೆದಿದ್ದು, 1080p@30fps ಸಾಮರ್ಥ್ಯದ ವಿಡಿಯೋಗಳನ್ನು ಸೆರೆಹಿಡಿಯಬಹುದಾಗಿದೆ.
ಮೊಟೊರೊಲಾ G32 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 30W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ಸ್ಟೀರಿಯೋ ಸ್ಪೀಕರ್‌ಗಳೊಂದಿಗೆ 3.5 ಎಂಎಂ ಜ್ಯಾಕ್ , ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.2, A2DP, LE,
ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸ್ಥಾನೀಕರಣ ಸೇರಿದಂತೆ ಇನ್ನಿತರೆ ಕನೆಕ್ಟಿವಿಟಿ ಫೀಚರ್ಸ್ ಪಡೆದಿದೆ.


Click it and Unblock the Notifications








