ಮೊಟೊದ ಈ ಫೋನ್ ಈಗ ಅಗ್ಗದ ಬೆಲೆಗೆ ಲಭ್ಯ; ಗ್ರಾಹಕರಿಗೆ ಭರ್ಜರಿ ಉಳಿತಾಯ!
ಮೊಟೊರೊಲಾ ಮೊಬೈಲ್ ಸಂಸ್ಥೆಯು g ಸರಣಿಯಲ್ಲಿ ಹಲವು ಬಜೆಟ್ ದರದ ಫೋನ್‌ಗಳನ್ನು ಪರಿಚಯಿಸಿದೆ ಆ ಪೈಕಿ ಇತ್ತೀಚಿನ ಮೊಟೊ g35 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳದಿದ್ದು, ಈ ಮೊಬೈಲ್ ಅಗ್ಗದ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಸದ್ಯ ಮೊಟೊರೊಲಾ g35 5G ( moto g35 5G ) ಫೋನ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ g35 5G ( moto g35 5G ) ಫೋನ್ ಶೇ. 20% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 9,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿ ಯಾಗಿ ಆಯ್ದ ಬ್ಯಾಂಕ್‌ಗಳ ಆಫರ್ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಲು ಅವಕಾಶ ಸಹ ಇದೆ.

ಈ ಎಂಟ್ರಿ ಲೆವೆಲ್ ಫೋನ್ ಗುವಾ ರೆಡ್, ಲೀಫ್ ಗ್ರೀನ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಈ ಮೊಬೈಲ್‌ನ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. ಇನ್ನುಳಿದಂತೆ ಮೊಟೊ g35 5G ( moto g35 5G ) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ g35 5G - ಫೀಚರ್ಸ್ ಮಾಹಿತಿ
ಮೊಟೊರೊಲಾ g35 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಡಿಸ್‌ಪ್ಲೇ 1,000 nits ಬ್ರೈಟ್ನೆಸ್ ಹಾಗೂ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದ್ದು, 240 Hz ಟಚ್ ಸ್ಯಾಂಪಲ್ ರೇಟ್ ಸೌಲಭ್ಯ ಪಡೆದುಕೊಂಡಿದೆ.
ಮೊಟೊ g35 5G ಸ್ಮಾರ್ಟ್‌ಫೋನ್ Unisoc T760 SoC ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಒದಗಿಸಲಾಗಿದೆ. ಅಲ್ಲದೇ ಈ ಮೊಬೈಲ್ ಇದು 4GB + 128 GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಒಳಗೊಂಡಿದೆ.
ಮೊಟೊ g35 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊ g35 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಅನುಗುಣವಾಗಿ 20 W ಚಾರ್ಜಿಂಗ್ ಸೌಲಭ್ಯ ಸಹ ನೀಡಲಾಗಿದೆ. ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್ C ಪೋರ್ಟ್ ಹೊಂದಿದೆ. ಅಲ್ಲದೇ Dolby Atmos ಆಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸೌಲಭ್ಯ, ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, SAR ಸೆನ್ಸಾರ್‌ಗಳನ್ನು ಪಡೆದಿದೆ.


Click it and Unblock the Notifications








