ಮೊಟೊ g35 5G ಫೋನಿನ ಫಸ್ಟ್ ಸೇಲ್; ಭರ್ಜರಿ ಆಫರ್..ಬೆಲೆ ಎಷ್ಟು?
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಮೊಟೊರೊಲಾ (Motorola) ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ಮೊಟೊ g35 5G (moto g35 5G) ಫೋನ್ ಕಡಿಮೆ ಬೆಲಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್ ಡಿಸೆಂಬರ್ 16 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಈ ಫೋನ್ 4GB RAM + 128GB ಸ್ಟೋರೇಜ್ ಅನ್ನು ಪಡೆದುಕೊಂಡಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಮೊಟೊ g35 5G (moto g35 5G) ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 16 ರಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮೊದಲ ಮಾರಾಟ ಶುರು ಮಾಡಲಿದೆ. ಈ ಮೊಬೈಲ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಅಲ್ಲದೇ ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಈ ಮೊಬೈಲ್‌ನ ಪ್ರಾರಂಭಿಕ ವೇರಿಯಂಟ್ ಬೆಲೆಯು 9,999ರೂ. ಗಳು ಪ್ರೈಸ್‌ಟ್ಯಾಗ್ ಪಡೆದಿದೆ.

ಇನ್ನು ಈ ಮೊಬೈಲ್ ಗುವಾ ರೆಡ್, ಲೀಫ್ ಗ್ರೀನ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದ್ದು, ಹಾಗಾದರೇ ಮೊಟೊ g35 5G (moto g35 5G) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ g35 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 240Hz ಟಚ್ ಸ್ಯಾಂಪಲ್ ರೇಟ್ ಸೌಲಭ್ಯ ಹೊಂದಿದೆ. ಅಲ್ಲದೇ ಡಿಸ್‌ಪ್ಲೇ 1,000ಚnits ಬ್ರೈಟ್ನೆಸ್ ಹಾಗೂ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದೆ.
ಮೊಟೊ g35 5G ಮೊಬೈಲ್ Unisoc T760 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಇದೆ. ಹಾಗೆಯೇ ಇದು 4GB + 128GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಒಳಗೊಂಡಿದೆ.
ಮೊಟೊ g35 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾಚಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊ g35 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಇದು ಹೈಲೈಟ್ ಫೀಚರ್ ಎನಿಸಿದೆ. ಇದಕ್ಕೆ ಪೂರಕವಾಗಿ 20W ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ. ಇದಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದು Dolby Atmos ಆಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸೌಲಭ್ಯ, ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, SAR ಸೆನ್ಸಾರ್‌ಗಳನ್ನು ಪಡೆದಿದೆ.


Click it and Unblock the Notifications








