ಇಂದು ಅಗ್ಗದ ಬೆಲೆಯ ಈ 5G ಮೊಬೈಲ್ ಖರೀದಿಗೆ ಲಭ್ಯ; ಜಬರ್ದಸ್ತ್ ಫೀಚರ್ಸ್!
ಮೊಟೊರೊಲಾ (Motorola) ಮೊಬೈಲ್ ಸಂಸ್ಥೆಯ ನೂತನ ಮೊಟೊ g35 5G (moto g35 5G) ಫೋನ್ ಪ್ರೈಸ್‌ಟ್ಯಾಗ್‌ನಿಂದ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಎಂಟ್ರಿ ಲೆವೆಲ್ ಮೊಬೈಲ್ ಇಂದು (ಡಿಸೆಂಬರ್ 16 ರಂದು) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಫೋನ್ Unisoc T760 SoC ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದೆ.
ಹೌದು, ಮೊಟೊರೊಲಾ ಸಂಸ್ಥೆಯ ಮೊಟೊ g35 5G ( moto g35 5G ) ಮೊಬೈಲ್ ಇಂದು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಸೇಲ್ ಶುರು ಮಾಡಲಿದೆ. ಈ ಮೊಬೈಲ್ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾವನ್ನು ಒಳಗೊಂಡಿದೆ. ಇದರೊಂದಿಗೆ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಪಡೆದುಕೊಂಡಿದೆ. ಇನ್ನು ಇದರ ಆರಂಭಿಕ ಬೆಲೆ 9,999 ರೂ. ಗಳು.

ಇನ್ನು ಈ ಮೊಬೈಲ್ ಗುವಾ ರೆಡ್, ಲೀಫ್ ಗ್ರೀನ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು 33W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದ್ದು, ಹಾಗಾದರೇ ಮೊಟೊ g35 5G ( moto g35 5G ) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ g35 5G - ಫೀಚರ್ಸ್ ಹೀಗಿವೆ
ಮೊಟೊ g35 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಡಿಸ್‌ಪ್ಲೇ 1,000 nits ಬ್ರೈಟ್ನೆಸ್ ಹಾಗೂ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, 240 Hz ಟಚ್ ಸ್ಯಾಂಪಲ್ ರೇಟ್ ಸೌಲಭ್ಯ ಹೊಂದಿದೆ.
ಮೊಟೊ g35 5G ಮೊಬೈಲ್ Unisoc T760 SoC ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಒದಗಿಸಲಾಗಿದೆ. ಅಲ್ಲದೇ ಈ ಫೋನ್ ಇದು 4GB + 128 GB ಆಂತರೀಕ ಸ್ಟೋರೇಜ್ ಆಯ್ಕೆ ಅನ್ನು ಒಳಗೊಂಡಿದೆ.
ಮೊಟೊ g35 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊ g35 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಇದಕ್ಕೆ ಅನುಗುಣವಾಗಿ 20 W ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ. ಇದಲ್ಲದೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್ C ಪೋರ್ಟ್ ಪಡೆದಿದೆ. ಅಲ್ಲದೇ Dolby Atmos ಆಡಿಯೋ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸೌಲಭ್ಯ, ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, SAR ಸೆನ್ಸಾರ್‌ಗಳನ್ನು ಪಡೆದಿದೆ.


Click it and Unblock the Notifications








