Home
ಸುದ್ದಿಜಾಲ

ಸಿಕ್ಕಾಪಟ್ಟೆ ಸೌಂಡ್‌ ಮಾಡಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ 30% ಡಿಸ್ಕೌಂಟ್ ಪಡೆದುಕೊಂಡಿದೆ!

ಜನಪ್ರಿಯ ಇ-ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಮೊಟೊರೊಲಾ G42 ಸ್ಮಾರ್ಟ್‌ಫೋನ್‌ ಮೇಲೆ ಬಿಗ್‌ ಆಫರ್‌ ನೀಡಿದೆ. ಈ ಮೂಲಕ ಮೊಟೊರೊಲಾ G42 ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಬರೋಬ್ಬರಿ 30% ಡಿಸ್ಕೌಂಟ್‌ ಘೋಷಣೆ ಮಾಡಿದೆ. ಇದರಿಂದಾಗಿ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.

ಹೌದು, ಫ್ಲಿಪ್‌ಕಾರ್ಟ್‌ ಮೊಟೊರೊಲಾ G42 ಸ್ಮಾರ್ಟ್‌ಫೋನ್‌ಗೆ ವಿಶೇಷ ರಿಯಾಯಿತಿ ನೀಡುತ್ತಿದೆ. ಡಿಸ್ಕೌಂಟ್‌ ಮಾತ್ರವಲ್ಲದೆ ಎಕ್ಸ್‌ಚೇಂಜ್‌ ಆಫರ್‌ ಹಾಗೂ ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡುವುದಾಗಿ ಹೇಳಿದ್ದು ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇನ್ನಷ್ಟು ಇಳಿಕೆಯನ್ನು ನಿರೀಕ್ಷಿಸಬಹುದಾಗಿದೆ. ಹಾಗಾದ್ರೆ ಮೊಟೊರೊಲಾ G42 ಸ್ಮಾರ್ಟ್‌ಫೋನ್‌ ಅನ್ನು ನೀವು ಯಾವ ಬೆಲೆಯಲ್ಲಿ ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸಿಕ್ಕಾಪಟ್ಟೆ ಸೌಂಡ್‌ ಮಾಡಿದ್ದ ಈ ಫೋನ್‌ ಇದೀಗ 30% ಡಿಸ್ಕೌಂಟ್ ಪಡೆದುಕೊಂಡಿದೆ!

ಮೊಟೊರೊಲಾ G42 ಸ್ಮಾರ್ಟ್‌ಫೋನ್‌ ಮೇಲೆ 30% ಡಿಸ್ಕೌಂಟ್‌
ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ G42 ಸ್ಮಾರ್ಟ್‌ಫೋನ್‌ ಮೇಲೆ 30% ಡಿಸ್ಕೌಂಟ್‌ ನೀಡಲಾಗ್ತಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ 16,999ರೂ. ಬದಲಿಗೆ ಕೇವಲ 11,799ರೂ.ಬೆಲೆಗೆ ದೊರೆಯಲಿದೆ. ಅಷ್ಟೇ ಅಲ್ಲ ಎಕ್ಸ್‌ಚೇಂಜ್‌ ಆಫರ್‌ (ಡಿವೈಸ್‌ನ ಗುಣಮಟ್ಟದ ಆದಾರದ ಮೇಲೆ)ಮತ್ತು ಬ್ಯಾಂಕ್ ಆಫರ್‌ಗಳು ಕೂಡ ಸೇರಿದ್ದು, 13,300ರೂ. ವರೆಗೆ ಉಳಿತಾಯ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ತನ್ನ ವಿಶೇಷ ಫೀಚರ್ಸ್‌ಗಳಿಂದಾಗಿಯೂ ಇಂದಿಗೂ ಕೂಡ ಬೇಡಿಕೆ ಉಳಿಸಿಕೊಂಡಿದೆ.

ಮೋಟೋ G42 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ವಿವರ: ಮೋಟೋ G42 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತ 83.9% ಆಗಿದೆ. ಇದು 411 ಪಿಪಿಐ ಸಾಂದ್ರತೆಯನ್ನು ಹೊಂದಿದೆ.

ಮೋಟೋ G42 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು: ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾಯರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಆನ್‌ಬೋರ್ಡ್ uMCP ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

ಸಿಕ್ಕಾಪಟ್ಟೆ ಸೌಂಡ್‌ ಮಾಡಿದ್ದ ಈ ಫೋನ್‌ ಇದೀಗ 30% ಡಿಸ್ಕೌಂಟ್ ಪಡೆದುಕೊಂಡಿದೆ!

ಮೋಟೋ G42 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌: ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಮೋಟೋ G42 ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌: ಮೋಟೋ G42 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಟರ್ಬೊಪವರ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಸಿಂಗಲ್‌ ಚಾರ್ಜ್‌ನಲ್ಲಿ 30 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ IP52-ರೇಟೆಡ್ ವಾಟರ್-ರೆಪೆಲ್ಲೆಂಟ್ ಬಿಲ್ಡ್ ಅನ್ನು ಹೊಂದಿದೆ. ಈ ಫೋನ್‌ನಲ್ಲಿ My UX ಫೀಚರ್ಸ್‌ ನೀಡಲಾಗಿದ್ದು, ಇದರ ಮೂಲಕ ನಿಮ್ಮ ಡಿವೈಸ್‌ ಅನ್ನು ನೀವು ಸನ್ನೆಗಳ ಮೂಲಕ ಕಂಟ್ರೋಲ್‌ ಮಾಡಬಹುದಾಗಿದೆ. ಜೊತೆಗೆ ಎಂಟರ್‌ಟೈನ್‌ಮೆಂಟ್‌ ಅನ್ನು ಕಸ್ಟ್‌ಮೈಸ್‌ ಮಾಡುವುದಕ್ಕೆ ಕೂಡ ಸಾದ್ಯವಾಗಲಿದೆ.

Best Mobiles in India

English summary
Motorola G42 phone has dropped by a massive discount on Flipkart
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+